ADVERTISEMENT

ಬಾಂಗ್ಲಾದ ವಲಸಿಗರಿಗೆ ಪಶ್ಚಿಮ ಬಂಗಾಳದಲ್ಲೆ ವ್ಯವಸ್ಥೆ ಮಾಡಿ: ಪೇಜಾವರ ಶ್ರೀ

​ಪ್ರಜಾವಾಣಿ ವಾರ್ತೆ
Published 15 ಡಿಸೆಂಬರ್ 2019, 10:29 IST
Last Updated 15 ಡಿಸೆಂಬರ್ 2019, 10:29 IST
ಪೇಜಾವರ ಶ್ರೀ
ಪೇಜಾವರ ಶ್ರೀ   

ರಾಯಚೂರು: ಬಾಂಗ್ಲಾದಿಂದ ವಲಸೆ ಬಂದವರಿಗೆ ಅನ್ಯ ರಾಜ್ಯಗಳಲ್ಲಿ ಆಶ್ರಯ ನೀಡದೇ ಪಶ್ಚಿಮ ಬಂಗಾಳದಲ್ಲೇ ಇರುವಂತೆ ನಿಯಂತ್ರಿಸಬೇಕಿದೆ ಎಂದು ಉಡುಪಿ ಪೇಜಾವರ ಮಠದ ವಿಶ್ವೇಶತೀರ್ಥ ಸ್ವಾಮೀಜಿ ಹೇಳಿದರು.

ನಗರದ ಶ್ರೀ ರಾಘವೇಂದ್ರ ಸ್ವಾಮಿ ಮಠದಲ್ಲಿ ಆಯೋಜಿಸಿದ್ದ ಸುಧಾಮಹಾಮಂಗಳ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದರು.

ಪೌರತ್ವ ಕಾಯ್ದೆ ಜಾರಿಗೆ ಬಂದಿರುವುದು ಅಕ್ರಮ ವಲಸಿಗರನ್ನು ಹೊರಹಾಕುವ ಉದ್ದೇಶಕ್ಕಾಗಿ.‌ ಅನೇಕ ವರ್ಷಗಳಿಂದ‌ ದೇಶದ ವಿವಿಧೆಡೆ ವಾಸಿಸುತ್ತಿರುವ ಬಾಂಗ್ಲಾ ವಲಸಿಗರಿಗೆ ನೂತನ ಕಾಯ್ದೆ ಅನುಕೂಲ ಮಾಡಿಕೊಟ್ಟಿದೆ. ಮುಸ್ಲಿಮರನ್ನು ಹೊರಹಾಕಲಾಗುತ್ತಿದೆ ಎನ್ನುವ ಆತಂಕವನ್ನು ಹರಡುತ್ತಿರುವುದು ಸರಿಯಲ್ಲ ಎಂದರು.

ADVERTISEMENT

ಈಶಾನ್ಯ ರಾಜ್ಯಗಳ ಕೆಲವು ನಿವಾಸಿಗಳ ಅಸ್ತಿತ್ವಕ್ಕೆ ಧಕ್ಕೆ ಬರುವ ಆತಂಕವಿದ್ದು, ಅದಕ್ಕಾಗಿ ಅಲ್ಲಿ ಹೋರಾಟ ನಡೆಯುತ್ತಿದೆ. ಕೇಂದ್ರವು ಸೇನೆ ಬಳಸಿ ಪರಿಸ್ಥಿತಿ ನಿಯಂತ್ರಿಸುವ ಬದಲು ಮನವರಿಕೆ ಮಾಡಿಕೊಟ್ಟು ಶಾಂತಿ ಪಾಲಿಸಬೇಕು ಎಂದು ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.