ADVERTISEMENT

ಲಾಕ್‌ಡೌನ್ | ಊರಿಗೆ ತೆರಳಲು ವಲಸೆ ಕಾರ್ಮಿಕರಿಗೆ ವ್ಯವಸ್ಥೆ: ಪಿಐಎಲ್ ವಜಾ

​ಪ್ರಜಾವಾಣಿ ವಾರ್ತೆ
Published 23 ಏಪ್ರಿಲ್ 2020, 14:26 IST
Last Updated 23 ಏಪ್ರಿಲ್ 2020, 14:26 IST
   

ಬೆಂಗಳೂರು: ‘ಕೋವಿಡ್-19ರ ಪರೀಕ್ಷೆಯಲ್ಲಿ ನೆಗೆಟಿವ್ ಬಂದ ಪ್ರಕರಣಗಳ ವಲಸೆ ಕಾರ್ಮಿಕರನ್ನು ರಾಜ್ಯ ಸರ್ಕಾರ ಮತ್ತು ಕೇಂದ್ರದ ಸರ್ಕಾರದ ಸಾರಿಗೆ ಮೂಲಕ ಅವರ ಸ್ವಂತ ಊರಿಗೆ ಕಳುಹಿಸಿಕೊಡುವಂತೆ ಸರ್ಕಾರಕ್ಕೆ ನಿರ್ದೇಶಿಸಬೇಕು’ಎಂದು ಕೋರಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಹೈಕೋರ್ಟ್‌ ವಜಾಗೊಳಿಸಿದೆ.

ಗುಬ್ಬಿ ತಾಲ್ಲೂಕಿನ ಎ.ಮಲ್ಲಿಕಾರ್ಜುನ ಸಲ್ಲಿಸಿದ್ದ ಈ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ಅಭಯ್ ಎಸ್. ಓಕಾ ನೇತೃತ್ವದ ನೇತೃತ್ವದ ವಿಭಾಗೀಯ ನ್ಯಾಯಪೀಠ ವಿಚಾರಣೆ ನಡೆಸಿತು.

ಅರ್ಜಿದಾರರ ಮನವಿ ಪುರಸ್ಕರಿಸಿದರೆ ಅದು ಕೇಂದ್ರ ಸರ್ಕಾರದ ಆದೇಶಕ್ಕೆ ವಿರುದ್ಧವಾಗಲಿದೆ’ ಎಂಬ ಅಭಿಪ್ರಾಯದೊಂದಿಗೆ ನ್ಯಾಯಪೀಠ ಈ ಅರ್ಜಿ ತಿರಸ್ಕರಿಸಿದೆ.

ADVERTISEMENT

ಲಾಕ್‌ಡೌನ್ ಪರಿಣಾಮ ವಲಸೆ ಕಾರ್ಮಿಕರನ್ನು ತಾತ್ಕಾಲಿಕ ಆಶ್ರಯ ಕೇಂದ್ರಗಳಲ್ಲಿ 14 ದಿನಗಳ ಕ್ವಾರಂಟೈನ್‌ಗೆ ಒಳಪಡಿಸಲಾಗಿತ್ತು. ಅವರಲ್ಲಿ ಕೋವಿಡ್-19 ರೋಗ ಲಕ್ಷಣ ಕಂಡು ಬರದಿದ್ದರೂ, ಆಶ್ರಯ ಕೇಂದ್ರಗಳಲ್ಲಿ ಇರಿಸಲಾಗಿದೆ. ಇದು ಅವೈಜಾನಿಕ. ಆದ್ದರಿಂದ, ನೆಗೆಟಿವ್ ಬಂದಿರುವ ಪ್ರಕರಣಗಳಲ್ಲಿ ಅಂತಹವರನ್ನುಸರ್ಕಾರದ ಸಾರಿಗೆ ಮೂಲಕ ಅವರ ಸ್ವಂತ ಊರಿಗೆ ಕಳುಹಿಸಿಕೊಡುವ ವ್ಯವಸ್ಥೆ ಮಾಡುವಂತೆ ಸರ್ಕಾರಕ್ಕೆ ನಿರ್ದೇಶಿಸಬೇಕು’ ಎಂದು ಅರ್ಜಿದಾರರು ಕೋರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.