ADVERTISEMENT

ಸುಳ್ಳು ಸುದ್ದಿ ಹಬ್ಬಿಸಿದ ಆರೋಪಿಯ ಬಂಧನ

​ಪ್ರಜಾವಾಣಿ ವಾರ್ತೆ
Published 6 ಏಪ್ರಿಲ್ 2020, 14:43 IST
Last Updated 6 ಏಪ್ರಿಲ್ 2020, 14:43 IST

ಬೆಳಗಾವಿ: ಇಲ್ಲಿನ ಜಿಲ್ಲಾಸ್ಪತ್ರೆಯಲ್ಲಿ ದಾಖಲಾಗಿದ್ದ ರೋಗಿಯೊಬ್ಬರ ಹೇಳಿಕೆಯನ್ನು ವಿಡಿಯೊ ಮಾಡಿ, ಸಾಮಾಜಿಕ ಜಾಲತಾಣಗಳಲ್ಲಿ ಹರಿಯಬಿಟ್ಟಿದ್ದ ಆರೋಪಿ ಹಮಜಾ ಎಂಬಾತನನ್ನು ಪೊಲೀಸರು ಸೋಮವಾರ ಬಂಧಿಸಿದ್ದಾರೆ.

ಪೀಡಿತ ವ್ಯಕ್ತಿಯ ಜೊತೆ ಸಂಭಾಷಣೆ ನಡೆಸಿದ ಆರೋಪಿಯು, ‘ಆಸ್ಪತ್ರೆಯಲ್ಲಿ ಕೋವಿಡ್‌ ಶಂಕಿತರಿಗೆ ಪ್ರತ್ಯೇಕವಾದ ವಾರ್ಡ್‌ಗಳಿಲ್ಲ. ಇತರ ರೋಗಿಗಳ ಜೊತೆ ಇಡಲಾಗಿದೆ. ಜಿಲ್ಲಾಡಳಿತ ಹಾಗೂ ವೈದ್ಯರು ಸರಿಯಾಗಿ ಚಿಕಿತ್ಸೆ ನೀಡುತ್ತಿಲ್ಲ’ ಎನ್ನುವ ಸುಳ್ಳು ಮಾಹಿತಿಯನ್ನು ವಿಡಿಯೊ ಮಾಡಿ ಸಾಮಾಜಿಕ ಜಾಲತಾಣಗಳಲ್ಲಿ ಹರಿಯಬಿಟ್ಟಿದ್ದರು. ಈ ಮೂಲಕ ಕೋಮು ಸೌಹಾರ್ದತೆ ಹಾಗೂ ಸಾಮಾಜಿಕ ಸ್ವಾಸ್ತ್ಯಕ್ಕೆ ಧಕ್ಕೆ ತರಲು ಆರೋಪಿ ಪ್ರಯತ್ನ ನಡೆಸಿದ್ದರು ಎಂದು ಪೊಲೀಸರು ಎಫ್‌ಐಆರ್‌ ದಾಖಲಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT