ADVERTISEMENT

ಪ್ರಚೋದನಕಾರಿ ಹೇಳಿಕೆ ನೀಡುವ ಶಾಸಕರನ್ನು ಬಂಧಿಸಿ: ಮಾಜಿ ಸಿಎಂ ಸಿದ್ದರಾಮಯ್ಯ

​ಪ್ರಜಾವಾಣಿ ವಾರ್ತೆ
Published 9 ಏಪ್ರಿಲ್ 2020, 2:21 IST
Last Updated 9 ಏಪ್ರಿಲ್ 2020, 2:21 IST
ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ
ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ   

ಬೆಂಗಳೂರು: ‘ಕೊರೊನಾ ಹರಡಲು ಮುಸ್ಲಿಮರು ಕಾರಣ, ಅವರನ್ನು ಗುಂಡಿಕ್ಕಿ ಕೊಲ್ಲಿ ಎಂದು ಹೇಳಿಕೆ ನೀಡಿದ ಬಿಜೆಪಿ ಶಾಸಕರಾದ ಬಸನಗೌಡ ಪಾಟೀಲ ಯತ್ನಾಳ ಮತ್ತು ಎಂ.ಪಿ.ರೇಣುಕಾಚಾರ್ಯ ಅವರನ್ನು ಬಂಧಿಸಬೇಕು‌’ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಒತ್ತಾಯಿಸಿದ್ದಾರೆ.

‘ಇಬ್ಬರೂ ಶಾಸಕರು ಪ್ರಚೋದನಾಕಾರಿಯಾಗಿ ಮಾತನಾಡಿದ್ದಾರೆ. ರೇಣುಕಾಚಾರ್ಯ ಅವರಂತೂ ಮುಖ್ಯಮಂತ್ರಿ ಅವರ ರಾಜಕೀಯ ಕಾರ್ಯದರ್ಶಿ. ಅವರನ್ನು ಈ ಹುದ್ದೆಯಿಂದ ಕೂಡಲೇ ವಜಾ ಮಾಡಬೇಕು. ಇವರಿಬ್ಬರೂ ಶಾಸಕರಾಗಿ ಇರಲು ಅರ್ಹರಲ್ಲ’ ಎಂದು ಬುಧವಾರ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಮುಂಗಾರು ಪೂರ್ವ ಗಾಳಿ, ಮಳೆಯಿಂದ ಕೆಲವೆಡೆ ಬಾಳೆ, ಭತ್ತ ಬೆಳೆ ನಾಶವಾಗಿದೆ. ಇದರ ಸಮೀಕ್ಷೆ ನಡೆಸಿ ಪರಿಹಾರ ನೀಡಬೇಕು’ ಎಂದು ಆಗ್ರಹಿಸಿದ್ದಾರೆ.

ADVERTISEMENT

ಬೆಲೆ ದಿಢೀರ್ ಏರಿಕೆ: ‘ಕೆಲ ವ್ಯಾಪಾರಸ್ಥರು ಅಗತ್ಯ ವಸ್ತುಗಳ ಬೆಲೆಯನ್ನು ದಿಢೀರ್ ಏರಿಕೆ ಮಾಡಿದ್ದಾರೆ. ಸರ್ಕಾರ ಈ ಕುರಿತು ಕ್ರಮ ಕೈಗೊಳ್ಳಬೇಕು’ ಎಂದು ಒತ್ತಾಯಿಸಿದ್ದಾರೆ.

ಸಲೀಂ ಅಹ್ಮದ್ ಪತ್ರ: ರೇಣುಕಾಚಾರ್ಯ ಅವರನ್ನು ಸಂಸದೀಯ ಕಾರ್ಯದರ್ಶಿ ಹುದ್ದೆಯಿಂದ ತಕ್ಷಣ ವಜಾಗೊಳಿಸಬೇಕು ಮತ್ತು ಇಬ್ಬರು ಶಾಸಕರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿ ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಂ ಅಹ್ಮದ್ ಅವರು ಮುಖ್ಯಮಂತ್ರಿ ಅವರಿಗೆ ಪತ್ರ ಬರೆದಿದ್ದಾರೆ.

ಲಾಕ್‍ಡೌನ್ ಮುಂದುವರಿದರೆ ಸಹಕಾರ: ‘ಲಾಕ್‍ಡೌನ್ ಮುಂದುವರಿಸುವ ಅನಿವಾರ್ಯ ಪರಿಸ್ಥಿತಿ ಎದುರಾದರೆ ರಾಜ್ಯದ ಜನರು ಅದಕ್ಕೆ ಸಹಕಾರ ನೀಡಬೇಕು. ನಾವೂ ಸಹಕಾರ ನೀಡುತ್ತೇವೆ’ ಎಂದಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.