ಚಾಮರಾಜನಗರ: ಗುಂಡ್ಲುಪೇಟೆ ತಾಲ್ಲೂಕಿನಲ್ಲಿ ಇಬ್ಬರು ಶಂಕಿತ ಉಗ್ರರನ್ನು ಬಂಧಿಸಲಾಗಿದೆ ಎಂಬ ಮಾಹಿತಿ ದೊರೆತಿದೆ.
ಹೆಚ್ಚಿನ ಮಾಹಿತಿ ನೀಡಲು ಪೊಲೀಸರು ನಿರಾಕರಿಸಿದ್ದಾರೆ. ಆಂತರಿಕ ಭದ್ರತಾ ವಿಭಾಗ, ಭಯೋತ್ಪಾದನಾ ನಿಗ್ರಹ ದಳ ಹಾಗೂ ಜಿಲ್ಲಾ ಪೊಲೀಸರು ಜಂಟಿಯಾಗಿ ಕಾರ್ಯಾಚರಣೆ ನಡೆಸಿ ಬಂಧಿಸಿದ್ದಾರೆ. ಇಬ್ಬರನ್ನು ಬೆಂಗಳೂರಿಗೆ ಕರೆದೊಯ್ಯಲಾಗಿದೆ ಎಂದು ಮೂಲಗಳು ತಿಳಿಸಿವೆ.
ಕೇರಳದ ಸಂಘಟನೆಯೊಂದಿಗೆ ಸಂಬಂಧ ಹೊಂದಿದ ಆರೋಪದಲ್ಲಿ ಇಬ್ಬರನ್ನೂ ಬಂಧಿಸಲಾಗಿದೆ ಎಂದು ಹೇಳಲಾಗುತ್ತಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.