ಪ್ರಜ್ವಲ್ ರೇವಣ್ಣ
ಬೆಂಗಳೂರು: ಲೈಂಗಿಕ ದೌರ್ಜನ್ಯ ಹಾಗೂ ಅತ್ಯಾಚಾರ ಪ್ರಕರಣದ ಆರೋಪಿಯಾಗಿರುವ ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅವರ ಬಂಧನಕ್ಕಾಗಿ ನಗರದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಶನಿವಾರ ವಾರಂಟ್ ಜಾರಿ ಮಾಡಿದೆ.
ಪೆನ್‌ಡ್ರೈವ್ ವಿಡಿಯೊಗಳು ಹರಿದಾಡುತ್ತಿದ್ದಂತೆ ತಲೆಮರೆಸಿಕೊಂಡಿರುವ ಪ್ರಜ್ವಲ್, ವಿದೇಶದಲ್ಲಿರುವ ಮಾಹಿತಿ ಇದೆ. ಅವರನ್ನು ಬಂಧಿಸಲು ವಾರಂಟ್ ಜಾರಿ ಮಾಡುವಂತೆ ಕೋರಿ ಎಸ್‌ಐಟಿ ಅಧಿಕಾರಿಗಳು ನ್ಯಾಯಾಲಯಕ್ಕೆ ಮನವಿ ಸಲ್ಲಿಸಿದ್ದರು.
ಮನವಿ ಪುರಸ್ಕರಿಸಿದ ನ್ಯಾಯಾಲಯ, ಪ್ರಜ್ವಲ್ ಬಂಧನಕ್ಕಾಗಿ ವಾರಂಟ್ ಜಾರಿ ಮಾಡಿ ಆದೇಶ ಹೊರಡಿಸಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.