ADVERTISEMENT

ಆಜಾನ್‌ ಹೆಸರಲ್ಲಿ ಶಾಂತಿ ಕದಡುವವರನ್ನು ಬಂಧಿಸಿ: ಬಿ.ಕೆ. ಹರಿಪ್ರಸಾದ್‌ ಆಗ್ರಹ

​ಪ್ರಜಾವಾಣಿ ವಾರ್ತೆ
Published 9 ಮೇ 2022, 8:33 IST
Last Updated 9 ಮೇ 2022, 8:33 IST
   

ಬೆಂಗಳೂರು: ಆಜಾನ್‌ ಸೇರಿದಂತೆ ಧಾರ್ಮಿಕ ವಿಚಾರಗಳನ್ನು ಮುಂದಿಟ್ಟುಕೊಂಡು ಶಾಂತಿ ಕದಡುವವರನ್ನು ಕಾನೂನುಬಾಹಿರ ಚಟುವಟಿಕೆಗಳ ತಡೆ (ಭಯೋತ್ಪಾದನೆ ನಿಗ್ರಹ) ಕಾಯ್ದೆ ಅಡಿಯಲ್ಲಿ ಬಂಧಿಸಬೇಕು ಎಂದು ವಿಧಾನ ಪರಿಷತ್‌ ವಿರೋಧ ಪಕ್ಷದ ನಾಯಕ ಬಿ.ಕೆ. ಹರಿಪ್ರಸಾದ್‌ ರಾಜ್ಯ ಸರ್ಕಾರವನ್ನು ಒತ್ತಾಯಿಸಿದರು.

ಸುದ್ದಿಗಾರರ ಜತೆ ಸೋಮವಾರ ಮಾತನಾಡಿದ ಅವರು, “ಧರ್ಮ- ಧರ್ಮಗಳ ನಡುವೆ ವಿಷ ಬೀಜ ಬಿತ್ತಲು ಇಂತಹ ಅಭಿಯಾನಗಳನ್ನು ಕೆಲವರು ಆರಂಭಿಸಿದ್ದಾರೆ. ಸರ್ಕಾರದ ವೈಫಲ್ಯಗಳನ್ನು ಮುಚ್ಚಿಹಾಕಲು ಸಂಘ ಪರಿವಾರದ ಏಜೆಂಟರ ಮೂಲಕ ಈ ಕೆಲಸ ಮಾಡಲಾಗುತ್ತಿದೆ. ಈ ರೀತಿ ಮಾಡುವವರು ಭಯೋತ್ಪಾದಕರು. ಅವರನ್ನು ತಕ್ಷಣ ಬಂಧಿಸಬೇಕುʼ ಎಂದು ಆಗ್ರಹಿಸಿದರು.

ಸರ್ಕಾರ ಹಲವು ವಿಚಾರಗಳಲ್ಲಿ ವಿಫಲವಾಗಿದೆ. ವೈಫಲ್ಯ ಮುಚ್ಚಿಕೊಳ್ಳಲು ಇಂತಹ ಕೃತ್ಯಗಳಿಗೆ ಅವಕಾಶ ನೀಡುತ್ತಿದೆ. ಸಂಘ ಪರಿವಾರದವರು ಆಕ್ಟೋಪಸ್‌ ಇದ್ದ ಹಾಗೆ. ಸದಾ ಕಾಲ ಸಮಾಜದಲ್ಲಿ ಶಾಂತಿ ಕದಡಲು ಪ್ರಯತ್ನಿಸುತ್ತಾರೆ ಎಂದು ವಾಗ್ದಾಳಿ ನಡೆಸಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.