ADVERTISEMENT

ಪಿಎಸ್‌ಐ ನೇಮಕಾತಿ ಅಕ್ರಮ ಪ್ರಕರಣ: ಪಟಿಯಾಲದ ಪೌಲ್ ಮನೆಯಲ್ಲೂ ಇ.ಡಿ ಶೋಧ

​ಪ್ರಜಾವಾಣಿ ವಾರ್ತೆ
Published 11 ನವೆಂಬರ್ 2022, 19:31 IST
Last Updated 11 ನವೆಂಬರ್ 2022, 19:31 IST
ಜಾರಿ ನಿರ್ದೇಶನಾಲಯ
ಜಾರಿ ನಿರ್ದೇಶನಾಲಯ   

ಬೆಂಗಳೂರು: ಪಿಎಸ್‌ಐ ನೇಮಕಾತಿ ಅಕ್ರಮ ಪ್ರಕರಣದ ಪ್ರಮುಖ ಆರೋಪಿ, ಐಪಿಎಸ್‌ ಅಧಿಕಾರಿ ಅಮ್ರಿತ್ ಪೌಲ್ ಅವರಿಗೆ ಸೇರಿದ ಪಂಜಾಬ್‌ನ ಪಟಿ ಯಾಲದ ಮನೆಯಲ್ಲೂ ಜಾರಿ ನಿರ್ದೇಶನಾಲಯದ (ಇ.ಡಿ) ಅಧಿಕಾರಿಗಳ ತಂಡವು ದಾಳಿ ನಡೆಸಿ ಶೋಧಿಸಿದೆ.

ಅಮ್ರಿತ್ ಪೌಲ್, ನೇಮಕಾತಿ ವಿಭಾಗದ ಡಿವೈಎಸ್‌ಪಿಯಾಗಿದ್ದ ಶಾಂತಕುಮಾರ್‌ ಹಾಗೂ ಬಂಧಿತ ಇತರೆ ಆರೋಪಿಗಳಿಗೆ ಸೇರಿದ 11 ಸ್ಥಳಗಳ ಮೇಲೆ ಗುರುವಾರ ಇ.ಡಿ ಅಧಿಕಾರಿಗಳು ದಾಳಿಸಿದ್ದರು. ಶುಕ್ರವಾರ ಅಧಿಕೃತ ಪ್ರಕಟಣೆ ಹೊರಡಿಸಿರುವ ಇ.ಡಿ ಅಧಿಕಾರಿಗಳು, ‘ಡಿಜಿಟಲ್ ಹಾಗೂ ಕಾಗದ ರೂಪದ ದಾಖಲೆ ವಶಕ್ಕೆ ಪಡೆಯಲಾಗಿದೆ’ ಎಂದು ತಿಳಿಸಿದ್ದಾರೆ.

ಸಹಕಾರನಗರದ ಪೌಲ್ ಮನೆ ಹಾಗೂ ಆಡುಗೋಡಿ ಪೊಲೀಸ್ ಕ್ವಾರ್ಟರ್ಸ್‌ನಲ್ಲಿರುವ ಶಾಂತಕುಮಾರ್ ಮನೆ ಮೇಲೆ ದಾಳಿ ನಡೆಸಿ ದಾಖಲೆ ವಶಕ್ಕೆ ಪಡೆಯಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.