ಬೆಂಗಳೂರು: ಶಾಸಕ ಆನಂದ್ ಸಿಂಗ್ ಮೇಲಿನ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಂಗ ಬಂಧನದಲ್ಲಿರುವ ಆರೋಪಿ ಶಾಸಕ ಜೆ.ಎನ್. ಗಣೇಶ್ ಜಾಮೀನು ಕೋರಿಶಾಸಕರು ಮತ್ತು ಸಂಸದರ ವಿರುದ್ಧದ ಕ್ರಿಮಿನಲ್ ಪ್ರಕರಣಗಳ ವಿಚಾರಣೆಯ ವಿಶೇಷ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ.
ಶನಿವಾರ ಈ ಅರ್ಜಿ ವಿಚಾರಣೆ ನಡೆಸಿದ ನ್ಯಾಯಾಧೀಶ ರಾಮಚಂದ್ರ ಡಿ.ಹುದ್ದಾರ ಅವರು, ಬಿಡದಿ ಪೊಲೀಸ್ ಠಾಣಾಧಿಕಾರಿಗೆ ನೋಟಿಸ್ ಜಾರಿಗೊಳಿಸಲು ಆದೇಶಿಸಿದರು.
ವಿಚಾರಣೆ ವೇಳೆ ಅರ್ಜಿದಾರರ ಪರ ಹಾಜರಿದ್ದ ವಕೀಲ ಸಿ.ಎಚ್.ಹನುಮಂತರಾಯ ಅವರು, ಇದೇ 7 ರಂದು ವಿಚಾರಣೆ ಕೈಗೆತ್ತಿಕೊಳ್ಳುವಂತೆ ಕೋರಿದರು.
ಇದಕ್ಕೆ ಪ್ರಾಸಿಕ್ಯೂಷನ್ ಪರ ಹಾಜರಿದ್ದ ವಕೀಲರು, ಹತ್ತು ದಿನಗಳ ಕಾಲಾವಕಾಶ ಬೇಕು ಎಂದು ಮನವಿ ಮಾಡಿದರು.
ನ್ಯಾಯಾಧೀಶರು ಇದೇ 8ಕ್ಕೆ ದಿನಾಂಕ ನಿಗದಿಗೊಳಿಸಿ ವಿಚಾರಣೆ ಮುಂದೂಡಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.