ADVERTISEMENT

ಶಿಕ್ಷಣ ಇಲಾಖೆಗೆ ಪಾರ್ಶ್ವವಾಯು: ಬಿಜೆಪಿ ಟೀಕೆ

​ಪ್ರಜಾವಾಣಿ ವಾರ್ತೆ
Published 16 ನವೆಂಬರ್ 2018, 17:37 IST
Last Updated 16 ನವೆಂಬರ್ 2018, 17:37 IST

ಬೆಂಗಳೂರು: ರಾಜ್ಯದಲ್ಲಿ ಶಿಕ್ಷಣ ಇಲಾಖೆ ಪಾರ್ಶ್ವವಾಯು ಪೀಡಿತವಾಗಿದೆ ಎಂದು ವಿಧಾನಪರಿಷತ್‌ ಸದಸ್ಯ ಅರುಣ್‌ ಶಹಾಪುರ ಟೀಕಿಸಿದರು.

ರಾಜ್ಯದ ಸಮಸ್ತ ಭಾರವನ್ನು ಹೊತ್ತಿರುವ ಮುಖ್ಯಮಂತ್ರಿ ಕುಮಾರಸ್ವಾಮಿ ಅವರಿಗೆ ಶಿಕ್ಷಣ ಇಲಾಖೆ ಬಗ್ಗೆ ಗಮನಕೊಡುವಷ್ಟು ಪುರುಸೊತ್ತಿಲ್ಲ ಎಂದು ಅವರು ಮಾಧ್ಯಮಗೋಷ್ಠಿಯಲ್ಲಿ ತಿಳಿಸಿದರು. ಕುಮಾರಸ್ವಾಮಿಗೆ ಅವರ ಬಳಿ ಇರುವ ಖಾತೆಗಳನ್ನು ನಿಭಾಯಿಸುವುದೇ ಕಷ್ಟವಾಗಿದೆ. ಜನ ಸಾಮಾನ್ಯರ ಮಾತಿರಲಿ, ಶಿಕ್ಷಣ ಕ್ಷೇತ್ರಗಳನ್ನು ಪ್ರತಿನಿಧಿಸುವ ವಿಧಾನಪರಿಷತ್‌ ಸದಸ್ಯರು ಭೇಟಿ ಮಾಡಿ ಸಮಸ್ಯೆಗಳ ಬಗ್ಗೆ ಚರ್ಚಿಸಲು ಸಾಧ್ಯವಿಲ್ಲ. ಯಾರ ಮಾತಿಗೂ ಬೆಲೆ ಕೊಡುತ್ತಿಲ್ಲ ಎಂದರು.

ಶಿಕ್ಷಕರ ವರ್ಗಾವಣೆ ಗೊಂದಲದ ಗೂಡಾಗಿದೆ. ಫೆಬ್ರವರಿಯಲ್ಲಿ ವರ್ಗಾವಣೆ ಪ್ರಕ್ರಿಯೆ ಆರಂಭಿಸುವುದಾಗಿ ಹೇಳಿದ್ದಾರೆ. ಆದರೆ, ಆ ವೇಳೆಗೆ ಪರೀಕ್ಷೆಗಳೇ ಮುಗಿದಿರುವುದಿಲ್ಲ. ನಂತರ ಲೋಕಸಭಾ ಚುನಾವಣೆ ಪ್ರಕ್ರಿಯೆ ಆರಂಭವಾಗುತ್ತದೆ ಎಂದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.