ನವದೆಹಲಿ: ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಅವರು ರಾಜ್ಯದ ರಾಜಕೀಯ ಬೆಳವಣಿಗೆಗಳ ಕುರಿತು ಪ್ರತಿಕ್ರಿಯೆ ನೀಡಲು ನಿರಾಕರಿಸಿದ್ದಾರೆ.
‘ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ರಾಜೀನಾಮೆ ನೀಡಲಿದ್ದಾರೆಯೇ?’, ‘ಮುಂದಿನ ಮುಖ್ಯಮಂತ್ರಿ ಯಾರಾಗಲಿದ್ದಾರೆ?’ ಎಂಬ ಪತ್ರಕರ್ತರ ಪ್ರಶ್ನೆಗೆ ಉತ್ತರ ನೀಡದ ಅವರು, ‘ಮುಂದಿನ ವಾರ ಭೇಟಿ ಮಾಡೋಣ’ ಎಂದಷ್ಟೇ ಹೇಳಿ ತಮ್ಮ ನಿವಾಸದಿಂದ ಹೊರಟು ಹೋದರು.
ಗುರುವಾರ ಬೆಳಿಗ್ಗೆ ಶಾಸಕ ಎಂ.ಪಿ. ರೇಣುಕಾಚಾರ್ಯ ಅವರನ್ನು ತಮ್ಮ ನಿವಾಸದಲ್ಲಿ ಭೇಟಿ ಮಾಡಿ ಸ್ವಲ್ಪ ಹೊತ್ತು ಚರ್ಚಿಸಿದ ಬಳಿಕ ಬಿಜೆಪಿ ಕೇಂದ್ರ ಕಚೇರಿಯತ್ತ ತೆರಳಿದ ಅರುಣ್ ಸಿಂಗ್ ಮೌನ ಮುರಿಯದೇ ಸಾಗಿದರು.
ಇದನ್ನೂ ಓದಿ... ಇದೇ 26ಕ್ಕೆ ವರಿಷ್ಠರು ನೀಡುವ ಸೂಚನೆ ಪಾಲಿಸಲು ಸಿದ್ಧ: ಬಿಎಸ್ವೈ
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.