
ಪ್ರಜಾವಾಣಿ ವಾರ್ತೆ
ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಕಾನೂನು ಸಲಹೆಗಾರರಾಗಿ ವಿರಾಜಪೇಟೆ ಕ್ಷೇತ್ರದ ಶಾಸಕ ಎ.ಎಸ್. ಪೊನ್ನಣ್ಣ ನೇಮಕಗೊಳ್ಳಲಿದ್ದಾರೆ.
ಪೊನ್ನಣ್ಣ ಅವರನ್ನು ತಮ್ಮ ಕಾನೂನು ಸಲಹೆಗಾರನನ್ನಾಗಿ ನೇಮಿಸಿ ಆದೇಶ ಹೊರಡಿಸುವಂತೆ ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮಾ ಅವರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚಿಸಿದ್ದಾರೆ.
ಅವರಿಗೂ ಸಂಪುಟ ದರ್ಜೆ ಸಚಿವರ ಸ್ಥಾನಮಾನದೊಂದಿಗೆ, ಎಲ್ಲ ಸೌಲಭ್ಯಗಳನ್ನು ನೀಡಿ ಆದೇಶ ಹೊರಡಿಸಬೇಕು ಎಂದೂ ಅವರು ತಿಳಿಸಿದ್ದಾರೆ
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.