
ಪ್ರಜಾವಾಣಿ ವಾರ್ತೆ
ಮಡಿಕೇರಿ: ‘ಕಾಂಗ್ರೆಸ್ ಶಾಸಕರ ದೆಹಲಿ ಭೇಟಿಯನ್ನು ಬಣ ರಾಜಕೀಯ ಎನ್ನಲಾಗದು. ಯಾವುದೇ ನಿರ್ಧಾರ ಶಾಸಕಾಂಗ ಸಭೆ ಹಾಗೂ ಹೈಕಮಾಂಡ್ ಆಗುತ್ತದೆಯೇ ಹೊರತು ದೆಹಲಿಯಲ್ಲಿ ಅಲ್ಲ’ ಎಂದು ಮುಖ್ಯಮಂತ್ರಿಯ ಕಾನೂನು ಸಲಹೆಗಾರ ಎ.ಎಸ್.ಪೊನ್ನಣ್ಣ ಅವರು ಪ್ರತಿಪಾದಿಸಿದರು.
ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಶಾಸಕರು ದೆಹಲಿಗೆ ಏಕೆ ಹೋದರೆಂದು ಅವರು ಎಲ್ಲೂ ಹೇಳಿಲ್ಲ. ನಾನೂ ಹೈಕಮಾಂಡ್ ಭೇಟಿ ಮಾಡಲು ಪ್ರಯತ್ನಿಸಿದ್ದು, ಇದುವರೆಗೂ ಅನುಮತಿ ಸಿಕ್ಕಿಲ್ಲ. ಪಂಚಾಯಿತಿ ಚುನಾವಣೆ ಸೇರಿ ಅನೇಕ ವಿಚಾರ ಚರ್ಚಿಸಬೇಕಿದೆ’ ಎಂದರು.
‘ಸಿದ್ದರಾಮಯ್ಯ ಅವರು ಮಾತಿಗೆ ತಪ್ಪುವುದಿಲ್ಲ ಎಂಬ ಡಿ.ಕೆ.ಸುರೇಶ್ ಅವರು ಹೇಳಿರುವುದರಲ್ಲಿ ತಪ್ಪಿಲ್ಲ. ಅವರು ಸಿದ್ದರಾಮಯ್ಯನವರ ಆಡಳಿತದ ಬಗ್ಗೆ ಹೇಳಿದ್ದಾರೆ’ ಎಂದು ಪ್ರತಿಪಾದಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.