ADVERTISEMENT

ಗುವಾಹಟಿ ಹೈಕೋರ್ಟ್‌ ಮುಖ್ಯ ನ್ಯಾಯಮೂರ್ತಿ ಹುದ್ದೆಗೆ ಬೋಪಣ್ಣ

​ಪ್ರಜಾವಾಣಿ ವಾರ್ತೆ
Published 12 ಅಕ್ಟೋಬರ್ 2018, 20:15 IST
Last Updated 12 ಅಕ್ಟೋಬರ್ 2018, 20:15 IST
ಎ.ಎಸ್.ಬೋಪಣ್ಣ
ಎ.ಎಸ್.ಬೋಪಣ್ಣ   

ಬೆಂಗಳೂರು: ಗುವಾಹಟಿ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಯಾಗಿ ಕರ್ನಾಟಕ ಹೈಕೋರ್ಟ್‌ ನ್ಯಾಯಮೂರ್ತಿ ಎ.ಎಸ್.ಬೋಪಣ್ಣ ಅವರನ್ನು ನೇಮಕ ಮಾಡುವಂತೆ ಕೇಂದ್ರ ಸರ್ಕಾರಕ್ಕೆ ಶಿಫಾರಸು ಮಾಡಲಾಗಿದೆ.

ಸುಪ್ರೀಂ ಕೋರ್ಟ್‌ ಮುಖ್ಯ ನ್ಯಾಯಮೂರ್ತಿ ರಂಜನ್‌ ಗೊಗೊಯಿ ನೇತೃತ್ವದ ಕೊಲಿಜಿಯಂ ಇದೇ 9ರಂದು ನಡೆಸಿದ ಸಭೆಯಲ್ಲಿ ಈ ನಿರ್ಧಾರ ಕೈಗೊಂಡಿದೆ.

ಎ.ಎಸ್.ಬೋಪಣ್ಣ ಸೇರಿದಂತೆ ರಾಜ್ಯದ ಹಿರಿಯ ನ್ಯಾಯಮೂರ್ತಿಗಳಾದ ಎಚ್.ಜಿ.ರಮೇಶ್ ಮತ್ತು ಹುಲವಾಡಿ ಜಿ.ರಮೇಶ್ ಅವರ ಹೆಸರೂ ಕೊಲಿಜಿಯಂನಲ್ಲಿ ಪ್ರಸ್ತಾಪವಾಗಿದ್ದವು.ಬೋಪಣ್ಣ ಅವರು, 2006ರಿಂದ ಹೈಕೋರ್ಟ್‌ ನ್ಯಾಯಮೂರ್ತಿಯಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.