ADVERTISEMENT

ಸಿಎಂ ನಿಧಿಗೆ ದೇಣಿಗೆ ನೀಡಿದ ಆಶಾ ಕಾರ್ಯಕರ್ತೆ

​ಪ್ರಜಾವಾಣಿ ವಾರ್ತೆ
Published 1 ಏಪ್ರಿಲ್ 2020, 14:02 IST
Last Updated 1 ಏಪ್ರಿಲ್ 2020, 14:02 IST
ಆಶಾ ಕಾರ್ಯಕರ್ತೆ ಯೋಗಿನಿ ಪಂಗಡಕರ್ ಅವರು ಶಿರಸಿ ತಹಶೀಲ್ದಾರ್ ಎಂ.ಆರ್.ಕುಲಕರ್ಣಿ ಮೂಲಕ ಸಿಎಂ ಪರಿಹಾರ ನಿಧಿಗೆ ₹ 2000 ಮೊತ್ತ ನೀಡಿದರು
ಆಶಾ ಕಾರ್ಯಕರ್ತೆ ಯೋಗಿನಿ ಪಂಗಡಕರ್ ಅವರು ಶಿರಸಿ ತಹಶೀಲ್ದಾರ್ ಎಂ.ಆರ್.ಕುಲಕರ್ಣಿ ಮೂಲಕ ಸಿಎಂ ಪರಿಹಾರ ನಿಧಿಗೆ ₹ 2000 ಮೊತ್ತ ನೀಡಿದರು   

ಶಿರಸಿ: ಬಡತನದಲ್ಲಿ ಜೀವನ ನಡೆಸುತ್ತಿರುವ ಆಶಾ ಕಾರ್ಯಕರ್ತೆಯೊಬ್ಬರು ತಮ್ಮ ಗೌರವಧನದಲ್ಲಿ ₹ 2000 ಮೊತ್ತವನ್ನು ಮುಖ್ಯಮಂತ್ರಿ ಪರಿಹಾರ ನಿಧಿಗೆ ನೀಡಿ ಮಾದರಿಯಾಗಿದ್ದಾರೆ.

ಇಲ್ಲಿನ ಆಶಾ ಕಾರ್ಯಕರ್ತೆ ಯೋಗಿನಿ ಪಂಗಡಕರ್ ಅವರು, ನಿತ್ಯ ನಾಲ್ಕೈದು ಕಿ.ಮೀ ಕಾಲ್ನಡಿಗೆಯಲ್ಲಿ ಸಂಚರಿಸಿ, ಕೊರೊನಾ ವೈರಸ್ ಸೋಂಕು ನಿಯಂತ್ರಿಸುವ ಬಗ್ಗೆ ಜಾಗೃತಿ ಮೂಡಿಸುತ್ತಿದ್ದಾರೆ. ‘ಸಾಮಾಜಿಕ ಕಾರ್ಯ ಮಾಡಿದ್ದಕ್ಕಾಗಿ ಸರ್ಕಾರ ನನಗೆ ನೀಡುವ ಗೌರವ ಧನದಲ್ಲಿ ಅಲ್ಪವನ್ನಾದರೂ, ತಿರುಗಿ ಸಮಾಜಕ್ಕೆ ಕೊಡಬೇಕು. ಇದು ಇತರರಿಗೆ ಪ್ರೇರಣೆಯಾಗಬೇಕು ಎಂಬ ಉದ್ದೇಶದಿಂದ ಪರಿಹಾರ ನಿಧಿಗೆ ಹಣ ಕೊಡಲು ಯೋಚಿಸಿದೆ’ ಎಂದು ಅವರು ಪ್ರತಿಕ್ರಿಯಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT