ADVERTISEMENT

ಆಶಾ ಕಾರ್ಯಕರ್ತೆಯರಿಗೆ ಪ್ರೋತ್ಸಾಹ ಧನ

​ಪ್ರಜಾವಾಣಿ ವಾರ್ತೆ
Published 17 ಜನವರಿ 2020, 19:29 IST
Last Updated 17 ಜನವರಿ 2020, 19:29 IST
   

ಬೆಂಗಳೂರು: ಆಶಾ ಕಾರ್ಯಕರ್ತೆಯರಿಗೆ ತಲಾ ₹3,000 ಪ್ರೋತ್ಸಾಹ ಧನ ನೀಡಲು ರಾಜ್ಯ ಸರ್ಕಾರ ತೀರ್ಮಾನಿಸಿದೆ.

ಈ ಪ್ರೋತ್ಸಾಹ ಧನ ಒಂದು ಸಲಕ್ಕೆ ನೀಡಲಾಗುವುದು. ಒಟ್ಟು 41,628 ಕಾರ್ಯಕರ್ತೆಯರಿಗೆ ಇದರ ಪ್ರಯೋಜನ ಸಿಗಲಿದೆ. ಇದಕ್ಕಾಗಿ ₹12.48 ಕೋಟಿ ನಿಗದಿ ಮಾಡ
ಲಾಗಿದೆ ಎಂದು ಸಚಿವ ಸಂಪುಟ ಸಭೆಯ ಬಳಿಕ ಕಾನೂನು ಸಚಿವ ಜೆ.ಸಿ.ಮಾಧುಸ್ವಾಮಿ ತಿಳಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT