ಬೆಂಗಳೂರು: ತಮ್ಮ ಬೇಡಿಕೆಗಳನ್ನು ಈಡೇರಿಸದ ಸರ್ಕಾರದ ವಿರುದ್ಧ ಹೋರಾಟದ ಹಾದಿ ತುಳಿದಿರುವ ಆಶಾ ಕಾರ್ಯಕರ್ತೆಯರು ಬುಧವಾರ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಅವರ ಸದಾಶಿವನಗರ ನಿವಾಸಕ್ಕೆ ಭೇಟಿ ನೀಡಿ, ತಮ್ಮ ಸಂಕಷ್ಟ ನಿವೇದಿಸಿಕೊಂಡರು.
ಜತೆಗೆ ತಮ್ಮ ಹೋರಾಟಕ್ಕೆ ಸಹಕಾರ ನೀಡುವಂತೆ ಕೋರಿದರು. ಆಶಾ ಕಾರ್ಯಕರ್ತೆಯರ ಮನವಿಗೆ ಸ್ಪಂದಿಸಿದ ಡಿ.ಕೆ ಶಿವಕುಮಾರ್ ಅವರು ನಿಮಗೆ ಬೇಕಾದ ಎಲ್ಲ ಬೆಂಬಲ ನೀಡುವುದಾಗಿ ಭರವಸೆ ನೀಡಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.