ADVERTISEMENT

ಮಂಗಳೂರು: ಆಶಾ ಕಾರ್ಯಕರ್ತೆಗೆ ಬೆದರಿಕೆ, ಎಸ್‌ಡಿಪಿಐ ಕಾರ್ಯಕರ್ತರ ಬಂಧನ

​ಪ್ರಜಾವಾಣಿ ವಾರ್ತೆ
Published 11 ಏಪ್ರಿಲ್ 2020, 13:12 IST
Last Updated 11 ಏಪ್ರಿಲ್ 2020, 13:12 IST
ಇಸ್ಮಾಯಿಲ್
ಇಸ್ಮಾಯಿಲ್   

ಮಂಗಳೂರು: ಕೊರೊನಾ ವೈರಸ್‌ ಸೋಂಕು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಮನೆ ಮನೆ ಭೇಟಿಯಲ್ಲಿದ್ದ ಆಶಾ ಕಾರ್ಯಕರ್ತೆಯೊಬ್ಬರ ಕರ್ತವ್ಯಕ್ಕೆ ಅಡ್ಡಿಪಡಿಸಿ, ಬೆದರಿಕೆ ಹಾಕಿದ ಆರೋಪದ ಮೇಲೆ ಇಬ್ಬರು ಎಸ್‌ಡಿಪಿಐ ಕಾರ್ಯಕರ್ತರನ್ನು ಪೊಲೀಸರು ಶನಿವಾರ ಬಂಧಿಸಿದ್ದಾರೆ.

ಮಲ್ಲೂರು ಬದ್ರಿಯಾ ನಗರ ನಿವಾಸಿಗಳಾದ ಇಸ್ಮಾಯಿಲ್‌ (45) ಮತ್ತು ಅಶ್ರಫ್‌ (32) ಬಂಧಿತರು. ವಸಂತಿ ಎಂಬ ಆಶಾ ಕಾರ್ಯಕರ್ತೆ ಶನಿವಾರ ಮನೆ ಭೇಟಿಗೆ ತೆರಳಿದ್ದ ವೇಳೆ ಇಬ್ಬರೂ ಕರ್ತವ್ಯಕ್ಕೆ ಅಡ್ಡಿಪಡಿಸಿದ್ದರು. ಕರ್ತವ್ಯ ನಿರ್ವಹಿಸದಂತೆ ತಡೆದಿದ್ದ ಆರೋಪಿಗಳು, ಆಶಾ ಕಾರ್ಯಕರ್ತೆಗೆ ಬೆದರಿಕೆಯನ್ನೂ ಹಾಕಿದ್ದರು ಎಂದು ಮಂಗಳೂರು ನಗರ ಪೊಲೀಸ್‌ ಕಮಿಷನರ್‌ ಡಾ.ಪಿ.ಎಸ್‌.ಹರ್ಷ ತಿಳಿಸಿದ್ದಾರೆ.

ವಸಂತಿ ಅವರು ನೀಡಿದ್ದ ದೂರಿನಂತೆ ಪ್ರಕರಣ ದಾಖಲಿಸಿಕೊಂಡ ಮಂಗಳೂರು ಗ್ರಾಮಾಂತರ ಠಾಣೆ ಪೊಲೀಸರು, ಆರೋಪಿಗಳನ್ನು ಬಂಧಿಸಿದ್ದಾರೆ. ಆರೋಪಿಗಳ ವಿರುದ್ಧ ಸರ್ಕಾರಿ ಇಲಾಖೆಯ ನಿಯೋಜಿತ ಸಿಬ್ಬಂದಿಯ ಕರ್ತವ್ಯ ನಿರ್ವಹಣೆಗೆ ಅಡ್ಡಿ ಮತ್ತು ಬೆದರಿಕೆ ಆರೋಪದಡಿ ಪ್ರಕರಣ ದಾಖಲಿಸಿದ್ದು, ತನಿಖೆ ಪ್ರಗತಿಯಲ್ಲಿದೆ ಎಂದು ಮಾಹಿತಿ ನೀಡಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.