ADVERTISEMENT

ಕೆಪಿಎಸ್‌ಸಿ ಮರು ಪರೀಕ್ಷೆ ಕಟ್ಟುನಿಟ್ಟಾಗಿ ನಡೆಸಿ: ಅಶೋಕ

​ಪ್ರಜಾವಾಣಿ ವಾರ್ತೆ
Published 2 ಸೆಪ್ಟೆಂಬರ್ 2024, 16:33 IST
Last Updated 2 ಸೆಪ್ಟೆಂಬರ್ 2024, 16:33 IST
ಆರ್. ಅಶೋಕ 
ಆರ್. ಅಶೋಕ    

ಬೆಂಗಳೂರು: ಕೆಪಿಎಸ್‌ಸಿ ಗೆಜೆಟೆಡ್‌ ಪ್ರೊಬೆಷನರಿ ಹುದ್ದೆಗಳ ಪೂರ್ವಭಾವಿ ಪರೀಕ್ಷೆಯಲ್ಲಿ ಆಗಿರುವ ಗಂಭೀರ ಲೋಪಗಳನ್ನು ಒಪ್ಪಿಕೊಂಡು ಮರುಪರೀಕ್ಷೆ ನಡೆಸಲು ಸರ್ಕಾರ ನಿರ್ಧಾರ ತೆಗೆದುಕೊಂಡಿದೆ. ಇದು ಉದ್ಯೋಗಕಾಂಕ್ಷಿಗಳು ಮತ್ತು ಪ್ರತಿಪಕ್ಷಗಳ ಹೋರಾಟಕ್ಕೆ ಸಿಕ್ಕ ಜಯ ಎಂದು ವಿಧಾನಸಭೆ ವಿರೋಧ ಪಕ್ಷ ನಾಯಕ ಆರ್‌.ಅಶೋಕ ಹೇಳಿದ್ದಾರೆ.

ಕೆಟ್ಟ ಮೇಲೆ ಬುದ್ಧಿ ಬಂತು ಎಂಬಂತೆ ಈಗಲಾದರೂ ಸರ್ಕಾರ ಎಚ್ಚೆತ್ತುಕೊಂಡು ಮರು ಪರೀಕ್ಷೆಯನ್ನು ಕಟ್ಟುನಿಟ್ಟಾಗಿ ನಡೆಸಲು ಕ್ರಮ ಕೈಗೊಳ್ಳಬೇಕು ಎಂದು ಅವರು ‘ಎಕ್ಸ್‌’ ಮೂಲಕ ಒತ್ತಾಯಿಸಿದ್ದಾರೆ.

ವಿವಿಧ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತೊಂದರೆ ಆಗದಂತೆ ಸೂಕ್ತ ಪರೀಕ್ಷಾ ದಿನಾಂಕ ನಿಗದಿ ಮಾಡಬೇಕು. ಅಭ್ಯರ್ಥಿಗಳಿಗೆ ಅನುಕೂಲವಾಗುವ ರೀತಿಯಲ್ಲಿ ಪರೀಕ್ಷಾ ಕೇಂದ್ರಗಳ ಹಂಚಿಕೆ, ಪ್ರಶ್ನೆ ಪತ್ರಿಕೆ ರಚನೆ, ಕನ್ನಡಕ್ಕೆ ತರ್ಜುಮೆ ಕಾರ್ಯವನ್ನು ಮಾಡಬೇಕು. ಲೋಪದೋಷಗಳು ಮರುಕಳಿಸದಂತೆ ಎಚ್ಚರವಹಿಸಬೇಕು ಎಂದು ಅವರು ಹೇಳಿದ್ದಾರೆ. 

ADVERTISEMENT

ಪರೀಕ್ಷೆಯಲ್ಲಿನ ಎಡವಟ್ಟುಗಳಿಗೆ ಕಾರಣರಾದ ಅಧಿಕಾರಿಗಳು ಮತ್ತು ಸಿಬ್ಬಂದಿಯನ್ನು ಮುಲಾಜಿಲ್ಲದೇ ಕಪ್ಪುಪಟ್ಟಿಗೆ ಸೇರಿಸಬೇಕು. ಮುಂದೆ ಯಾವುದೇ ಸ್ಪರ್ಧಾತ್ಮಕ ಪರೀಕ್ಷೆಗಳ ಕರ್ತವ್ಯಕ್ಕೂ ಅವರನ್ನು ನಿಯೋಜಿಸಬಾರದು ಎಂದಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.