
ಪ್ರಜಾವಾಣಿ ವಾರ್ತೆ
ಬೆಂಗಳೂರು: ‘ಬಿಹಾರದ ವಿಧಾನಸಭಾ ಚುನಾವಣೆಯಲ್ಲಿ ಎನ್‌ಡಿಎ ಗೆಲ್ಲಲಿದೆ ಎಂದು ಸಮೀಕ್ಷೆಗಳು ಹೇಳುತ್ತಿವೆ. ಆದ್ದರಿಂದ ಫಲಿತಾಂಶ ಬಂದ ಬಳಿಕ ರಾಹುಲ್‌ಗಾಂಧಿ ಮತಗಳ್ಳತನದ ಆರೋಪ ಮಾಡುವುದು ಖಂಡಿತ’ ಎಂದು ವಿರೋಧಪಕ್ಷದ ನಾಯಕ ಆರ್.ಅಶೋಕ ಹೇಳಿದರು.
ಸಚಿವ ಪ್ರಿಯಾಂಕ್ ಖರ್ಗೆ ಅವರಿಗೆ ಗೃಹ ಸಚಿವ ಅಮಿತ್ ಶಾ ಅವರ ಕುರಿತು ಮಾತನಾಡುವ ನೈತಿಕತೆ ಇಲ್ಲ. ಮಲ್ಲಿಕಾರ್ಜುನ ಖರ್ಗೆ ರಾಜ್ಯದಲ್ಲಿ ಗೃಹ ಸಚಿವರಾಗಿದ್ದ ಸಂದರ್ಭದಲ್ಲಿ ದಲಿತರನ್ನು ಸುಟ್ಟು ಹಾಕಿದ ಘಟನೆ ನಡೆದಿತ್ತು. ಆ ಪ್ರಕರಣದಲ್ಲಿ ಮಲ್ಲಿಕಾರ್ಜುನ ಖರ್ಗೆ ಅವರ ವೈಫಲ್ಯಗಳ ಬಗ್ಗೆ ಪ್ರಿಯಾಂಕ್ ಮಾತನಾಡಲಿ ಎಂದು ಅಶೋಕ ಹೇಳಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.