ADVERTISEMENT

ಕಾಲ್ತುಳಿತ ದುರಂತ: ಮಾನವ ಹಕ್ಕು ಆಯೋಗಕ್ಕೆ ಅಶೋಕ ಪತ್ರ

​ಪ್ರಜಾವಾಣಿ ವಾರ್ತೆ
Published 12 ಜೂನ್ 2025, 16:02 IST
Last Updated 12 ಜೂನ್ 2025, 16:02 IST
ವಿಧಾನಸಭೆಯ ವಿರೋಧ ಪಕ್ಷದ ನಾಯಕ ಆರ್. ಅಶೋಕ ಪತ್ರಿಕಾ ಗೋಷ್ಠಿಯಲ್ಲಿ ಭಾಗವಹಿಸಿದರು.ಪ್ರಜಾವಾಣಿ ಚಿತ್ರ ಕಿಶೋರ್ ಕುಮಾರ್ ಬೋಳಾರ್
ವಿಧಾನಸಭೆಯ ವಿರೋಧ ಪಕ್ಷದ ನಾಯಕ ಆರ್. ಅಶೋಕ ಪತ್ರಿಕಾ ಗೋಷ್ಠಿಯಲ್ಲಿ ಭಾಗವಹಿಸಿದರು.ಪ್ರಜಾವಾಣಿ ಚಿತ್ರ ಕಿಶೋರ್ ಕುಮಾರ್ ಬೋಳಾರ್   

ಬೆಂಗಳೂರು:ಆರ್‌ಸಿಬಿ ವಿಜಯೋತ್ಸವ ಕಾಲ್ತುಳಿತ ದುರಂತದ ಸಂತ್ರಸ್ತರಿಗೆ ನ್ಯಾಯ ಒದಗಿಸಲು ಮಧ್ಯ ಪ್ರವೇಶಿಸುವಂತೆ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗಕ್ಕೆ ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್‌.ಅಶೋಕ ಪತ್ರ ಬರೆದಿದ್ದಾರೆ.

ಆರ್‌ಸಿಬಿ ಗೆಲುವಿನ ಸಂಭ್ರಮಾಚರಣೆಯ ದಿನದಂದು, ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕಾಲ್ತುಳಿತದಲ್ಲಿ 11 ಜನ ಮೃತಪಟ್ಟಿದ್ದರು. 75 ಜನ ತೀವ್ರವಾಗಿ ಗಾಯಗೊಂಡಿದ್ದರು. ಜನರ ಸುರಕ್ಷತೆ ವಿಚಾರದಲ್ಲಿ ರಾಜ್ಯ ಸರ್ಕಾರ ನಿರ್ಲಕ್ಷ್ಯ ತೋರಿದೆ. ಈ ಕಾರ್ಯಕ್ರಮವನ್ನು ಸರಿಯಾಗಿ ನಿರ್ವಹಣೆ ಮಾಡಿಲ್ಲ ಎಂದು ಅವರು ದೂರಿದ್ದಾರೆ.

ಚಿನ್ನಸ್ವಾಮಿ ಕ್ರೀಡಾಂಗಣದ ಒಳಗೆ 35 ಸಾವಿರ ಜನ ಹೋಗಬಹುದು. ಆದರೆ ಉಚಿತ ಪಾಸ್‌ ಹಾಗೂ ದಾರಿ ತಪ್ಪಿಸುವ ಘೋಷಣೆಯಿಂದ ಅಪಾರ ಪ್ರಮಾಣದಲ್ಲಿ ಜನ ಬಂದು ಕ್ರೀಡಾಂಗಣಕ್ಕೆ ನುಗ್ಗಿದ್ದಾರೆ. ಪೊಲೀಸ್‌ ಮತ್ತು ಭದ್ರತಾ ಸಿಬ್ಬಂದಿಯ ಕೊರತೆಯೂ ಇತ್ತು. ಆಂಬುಲೆನ್ಸ್‌, ಪ್ರಾಥಮಿಕ ಚಿಕಿತ್ಸಾ ವ್ಯವಸ್ಥೆ, ಕುಡಿಯುವ ನೀರು ಸೇರಿ ಅಗತ್ಯ ಸೌಲಭ್ಯಗಳನ್ನು ಒದಗಿಸಿರಲಿಲ್ಲ. ಈ ತಪ್ಪಿನಲ್ಲಿ ಆರ್‌ಸಿಬಿ, ಡಿಎನ್ಎ ಈವೆಂಟ್ ಮ್ಯಾನೇಜ್‌ಮೆಂಟ್ ಹಾಗೂ ಕರ್ನಾಟಕ ಸ್ಟೇಟ್ ಕ್ರಿಕೆಟ್‌ ಅಸೋಸಿಯೇಶನ್‌ ಪಾತ್ರವೂ ಇದೆ ಎಂದು ಅಶೋಕ ಹೇಳಿದ್ದಾರೆ.

ADVERTISEMENT

ಈ ದುರಂತದ ಘಟನೆ ಕುರಿತು ಸ್ವಯಂ ಪ್ರೇರಿತವಾಗಿ ದೂರಾಗಿ ಪರಿಗಣಿಸಿ ತನಿಖೆ ನಡೆಸಬೇಕು ಎಂದು ಅವರು ಮನವಿ ಮಾಡಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.