ADVERTISEMENT

ಅಶ್ವಮೇಧ ಎಂದರೆ ಕುದುರೆ ಬಲಿ: KSRTC ಬಸ್ಸಿಗೆ ಈ ಹೆಸರಿಟ್ಟವರು ಯಾರೋ..? ರವಿಕೃಷ್ಣ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 6 ಫೆಬ್ರುವರಿ 2024, 10:34 IST
Last Updated 6 ಫೆಬ್ರುವರಿ 2024, 10:34 IST
<div class="paragraphs"><p>ಕೆಎಸ್‌ಆರ್‌ಟಿಸಿಯ ಅಶ್ವಮೇಧ ಬಸ್‌</p></div>

ಕೆಎಸ್‌ಆರ್‌ಟಿಸಿಯ ಅಶ್ವಮೇಧ ಬಸ್‌

   

ಬೆಂಗಳೂರು: ‘ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ ಪರಿಚಯಿಸಿದ ನೂತನ ಬಸ್ಸಿಗೆ ‘ಅಶ್ವಮೇಧ’ ಎಂದು ಹೆಸರಿಟ್ಟವರು ಯಾರೋ ತಿಳಿಯದು. ಅಶ್ವಮೇಧ ಎಂದರೆ ‘ಕುದುರೆ ಬಲಿ’ ಎಂದರ್ಥ. ಇಲ್ಲಿ ಬಲಿಯಾಗುವುದು ಬಸ್ಸೋ...? ಅಥವಾ ಪ್ರಯಾಣಿಕರೋ...?’ ಎಂದು ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷ (ಕೆಆರ್‌ಎಸ್‌) ಪಕ್ಷದ ರಾಜ್ಯ ಘಟಕದ ಅಧ್ಯಕ್ಷ ರವಿಕೃಷ್ಣಾ ರೆಡ್ಡಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಈ ಕುರಿತು ಸಾಮಾಜಿಕ ಜಾಲತಾಣದಲ್ಲಿ ಬರೆದುಕೊಂಡಿರುವ ಅವರು, ‘ಎಂಥ ಅಸೂಕ್ಷ್ಮ ಹೆಸರು! ಕನ್ನಡ ಅಥವಾ ಸಂಸ್ಕೃತ ಗೊತ್ತಿಲ್ಲದ ಯಾರೋ ಈ ಹೆಸರು ಪ್ರಸ್ತಾಪಿಸಿದ್ದಾರೆ. ಅದನ್ನು ಅವರಂತ ಮತ್ತೊಬ್ಬರು ಒಪ್ಪಿಗೆ ನೀಡಿ ಇಟ್ಟಿದ್ದಾರೆ. ಸರ್ಕಾರದಲ್ಲಿ ಇನ್ನೆಂತಹ ಅಜ್ಞಾನಿ ಮತ್ತು ಅವಿವೇಕಿಗಳು ಇದ್ದರೋ’ ಎಂದು ಆತಂಕ ವ್ಯಕ್ತಪಡಿಸಿದ್ದಾರೆ.

ADVERTISEMENT

‘ಈ ಸೇವೆಗೆ ಚಾಲನೆ ಕೊಡುವಾಗ ನಮ್ಮ ಕನ್ನಡ ವ್ಯಾಕರಣದ ಪ್ರಕಾಂಡ ಪಂಡಿತ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಯಾವ ರೀತಿಯ ಮಾನಸಿಕ ಆಘಾತವಾಗಿರಬಹುದು?’ ಎಂದು ರವಿಕೃಷ್ಣಾ ರೆಡ್ಡಿ ಕಳವಳ ವ್ಯಕ್ತಪಡಿಸಿದ್ದಾರೆ.

‘KSRTC ಅಧಿಕಾರಿಗಳು ಈ ಕೂಡಲೇ ಇಂಥ ಅನರ್ಥಕಾರಿ ಹೆಸರನ್ನು ಬದಲಾಯಿಸಬೇಕು. ಬೇಕಾದರೆ #ಕುದುರೆಸಾರೋಟು ಎಂದೋ, ಅಥವಾ ಸಂಸ್ಕೃತ ಮೂಲದ್ದೇ ಆಗಬೇಕು ಎಂದರೆ #ಅಶ್ವಸಂಚಾರ ಎಂದೋ ಬದಲಾಯಿಸಿ’ ಎಂದು ಸಲಹೆ ನೀಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.