ಬೆಂಗಳೂರು: ಸನಾತನ ಧರ್ಮ ನಿರ್ಮೂಲನೆ ಆಗಬೇಕು ಎಂದು ತಮಿಳುನಾಡು ಸಚಿವ ಉದಯನಿಧಿ ಸ್ಟಾಲಿನ್ ಹೇಳಿಕೆ ನೀಡಿದ್ದಾರೆ. ದುರಹಂಕಾರದಿಂದ ಹೇಳಿಕೆ ನೀಡಿರುವ ಅವರನ್ನು ಸಚಿವ ಸ್ಥಾನದಿಂದಲೇ ಉಚ್ಚಾಟಿಸಬೇಕು ಎಂದು ಬಿಜೆಪಿ ಶಾಸಕ ಡಾ.ಸಿ.ಎನ್.ಅಶ್ವತ್ಥನಾರಾಯಣ ಒತ್ತಾಯಿಸಿದ್ದಾರೆ.
ಈ ಕುರಿತು ಸುದ್ದಿಗಾರರ ಜತೆ ಮಾತನಾಡಿರುವ ಅವರು, ಉದಯನಿಧಿ ಹೇಳಿಕೆ ಅಜ್ಞಾನದಿಂದ ಕೂಡಿದೆ. ಇಂತಹ ದ್ವೇಷಕಾರಿ ಹೇಳಿಕೆ ನೀಡಿದ್ದಕ್ಕಾಗಿ ಅವರು ದೇಶದ ಕ್ಷಮೆ ಕೇಳಬೇಕು ಎಂದು ಆಗ್ರಹಿಸಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.