ADVERTISEMENT

ಅಮಿತ್ ಶಾ ಭೇಟಿಯಿಂದ ಹಳೆ ಮೈಸೂರು ಭಾಗದಲ್ಲಿ ಪಕ್ಷಕ್ಕೆ ಶಕ್ತಿ- ಅಶ್ವತ್ಥನಾರಾಯಣ

​ಪ್ರಜಾವಾಣಿ ವಾರ್ತೆ
Published 28 ಡಿಸೆಂಬರ್ 2022, 13:18 IST
Last Updated 28 ಡಿಸೆಂಬರ್ 2022, 13:18 IST
ಸಿ.ಎನ್‌.ಅಶ್ವತ್ಥನಾರಾಯಣ
ಸಿ.ಎನ್‌.ಅಶ್ವತ್ಥನಾರಾಯಣ   

ಬೆಳಗಾವಿ: ಗೃಹ ಸಚಿವ ಅಮಿತ್‌ ಶಾ ಅವರ ರಾಜ್ಯ ಭೇಟಿಯಿಂದ ಪಕ್ಷಕ್ಕೆ ದೊಡ್ಡ ಮಟ್ಟದಲ್ಲಿ ಶಕ್ತಿ ಸಂಚಲನವಾಗಲಿದೆ ಎಂದು ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್‌.ಅಶ್ವತ್ಥನಾರಾಯಣ ಹೇಳಿದ್ದಾರೆ.

ಬುಧವಾರ ಸುದ್ದಿಗಾರರ ಜತೆ ಮಾತನಾಡಿದ ಅವರು, ಇವರ ಭೇಟಿಯಿಂದ ಹಳೇ ಮೈಸೂರು ಭಾಗದಲ್ಲಿ ಪಕ್ಷದ ಶಕ್ತಿ ವೃದ್ಧಿಯಾಗಲಿದ್ದು, ಚುನಾವಣೆಯಲ್ಲಿ ಹೆಚ್ಚಿನ ಸ್ಥಾನಗಳನ್ನು ಗೆಲ್ಲಲು ಸಾಧ್ಯವಾಗಲಿದೆ ಎಂದರು.

ಹಳೇ ಮೈಸೂರು ಭಾಗದಲ್ಲಿ ಕಾಂಗ್ರೆಸ್ ಮತ್ತು ಜೆಡಿಎಸ್‌ ಏನು ಮಾಡಿವೆ. ಮೈಶುಗರ್‌ ಕಾರ್ಖಾನೆಯನ್ನೇ ಸರಿಯಾಗಿ ನಿರ್ವಹಣೆ ಮಾಡಲು ಇವರಿಗೆ ಸಾಧ್ಯವಾಗಿಲ್ಲ.ಈ ಭಾಗದ ಜನಕ್ಕೆ ಇವೆರಡೂ ಪಕ್ಷಗಳಿಂದ ನಿರಾಸೆ ಆಗಿದೆ. ಈ ಜಿಲ್ಲೆಗಳಲ್ಲಿ ಬಿಜೆಪಿಯಿಂದಲೇ ಅಭಿವೃದ್ಧಿಯಾಗಿದೆ ಎಂದರು.

ADVERTISEMENT

ಅವಧಿಪೂರ್ವ ಚುನಾವಣೆ ಬಗ್ಗೆ ಪ್ರಶ್ನಿಸಿದಾಗ, ಚುನಾವಣೆಯನ್ನು ಯಾವಾಗ ನಡೆಸಬೇಕು ಎಂಬುದನ್ನು ಚುನಾವಣಾ ಆಯೋಗ ನಿರ್ಧರಿಸುತ್ತದೆ ಎಂದು ಪ್ರತಿಕ್ರಿಯಿಸಿದರು.

ರಾಮನಗರದಲ್ಲಿರುವ ರಾಮದೇವರ ಬೆಟ್ಟವನ್ನು ದಕ್ಷಿಣ ಅಯೋಧ್ಯೆ ಮಾದರಿಯಲ್ಲಿ ಅಭಿವೃದ್ಧಿ ಮಾಡುತ್ತೇವೆ. ದೇವಸ್ಥಾನದ ಅಭಿವೃದ್ಧಿಗೆ ಯೋಜನೆ ರೂಪಿಸಲು ಮುಖ್ಯಮಂತ್ರಿಯವರು ಸೂಚನೆ ನೀಡಿದ್ದಾರೆ. ಅಲ್ಲಿರುವ ರಾಮದೇವರ ದೇವಸ್ಥಾನವನ್ನು ಬೀರ್ಣೋದ್ಧಾರ ಮಾಡಿ, ಅಯೋಧ್ಯೆ ಮಾದರಿಯಲ್ಲಿ ಅಭಿವೃದ್ಧಿ ಮಾಡುತ್ತೇವೆ. ಜೀರ್ಣೋದ್ಧಾರ ಕಾರ್ಯಕ್ರಮಕ್ಕೆ ಉತ್ತರಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್‌ ಅವರನ್ನು ಆಹ್ವಾನಿಸುತ್ತೇವೆ ಎಂದು ಅವರು ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.