ಮೈಸೂರು: ಹಲ್ಲೆಗೊಳಗಾದ ಶಾಸಕ ತನ್ವೀರ್ ಸೇಠ್ ಅವರನ್ನು ಕೊಲಂಬಿಯಾ ಏಷಿಯಾ ಆಸ್ಪತ್ರೆಯ ತೀವ್ರನಿಗಾ ಘಟಕದಲ್ಲಿ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ನಸುಕಿನಿಂದಲೇ ಗಣ್ಯರು ಹೆಚ್ಚಿನ ಸಂಖ್ಯೆಯಲ್ಲಿ ಭೇಟಿ ನೀಡುತ್ತಿದ್ದಾರೆ.ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಸಂಸದ ಪ್ರತಾಪಸಿಂಹ, ಎನ್.ಕ್ಷೇತ್ರದಲ್ಲಿ ರೌಡಿಗಳ ಹಾವಳಿ ಹೆಚ್ಚಾಗಿದೆ. ಪೊಲೀಸರು ಕೂಡಲೇ ಸಮಾಜ ವಿರೋಧಿ ಶಕ್ತಿಗಳನ್ನು ಬಗ್ಗು ಬಡಿಯಲು ಕೂಬಿಂಗ್ ನಡೆಸಬೇಕು ಎಂದು ಒತ್ತಾಯಿಸಿದರು.
ಕಾಂಗ್ರೆಸ್ ಮುಖಂಡ ಧ್ರುವನಾರಾಯಣ, ತನ್ವೀತ್ ಸೇಠ್ ಅವರ ಜೀವಕ್ಕೆ ಅಪಾಯ ಇಲ್ಲ ಎಂದು ವೈದ್ಯರು ತಿಳಿಸಿದ್ದಾರೆ. ಇಂತಹ ಘಟನೆ ನಡೆಯದಂತೆ ಸೂಕ್ತ ಮುನ್ನಚ್ಚರಿಕೆ ವಹಿಸಬೇಕು' ಎಂದು ಹೇಳಿದರು.
ಶಾಸಕ ಯು.ಟಿ.ಖಾದರ್, ವಿಧಾನಪರಿಷತ್ ಸದಸ್ಯ ಸಂದೇಶ್ ನಾಗರಾಜ್ ಸೇರಿದಂತೆ ಹಲವರು ಭೇಟಿ ನೀಡಿ ಯೋಗಕ್ಷೇಮ ವಿಚಾರಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.