ಬೆಂಗಳೂರು: ಐದು ರಾಜ್ಯಗಳ ವಿಧಾನಸಭೆ ಚುನಾವಣೆ ಫಲಿತಾಂಶದ ಹಿನ್ನೆಲೆಯಲ್ಲಿ ಪ್ರತಿಕ್ರಿಯೆ ನೀಡಿರುವ ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡ ಅವರು ಬಿಜೆಪಿಗೆ ಟಾಂಗ್ ನೀಡಿದ್ದಾರೆ.
‘ಇದು ಪ್ರಜಾಪ್ರಭುತ್ವ ರಾಷ್ಟ್ರ. ಪ್ರಜೆಗಳು ಹೇಳಿದಂತೆ ನಾವು ಕೇಳಬೇಕಷ್ಟೇ. ನಾವು ಹೇಳಿದ್ದೆಲ್ಲ ಇಲ್ಲಿ ನಡೆಯುವುದಿಲ್ಲ. ಕಾಂಗ್ರೆಸ್ ಮುಕ್ತ ಭಾರತ, ಪ್ರತಿಪಕ್ಷ ಮುಕ್ತ ಭಾರತ ಮಾಡುತ್ತೇವೆಂಬುದೆಲ್ಲ ಕೇವಲ ಅಹಮಿಕೆ. ಜನ ಇಂದು ಅಹಂ ಮುಕ್ತ ಭಾರತ ಮಾಡಿದ್ದಾರೆ. ಸಮಸ್ಯೆ ಮುಕ್ತ ಭಾರತ ಮಾಡುವುದರತ್ತ ಅಧಿಕಾರರೂಢ ಬಿಜೆಪಿ ಮನಸ್ಸು ಮಾಡಲಿ‘ ಎಂದು ಅವರು ಟ್ವೀಟ್ ಮಾಡಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.