
ಚುನಾವಣೆ
ನವದೆಹಲಿ: ಪಂಚ ರಾಜ್ಯಗಳ ವಿಧಾನಸಭಾ ಚುನಾವಣೆಗೆ ಮುಂದಿನ ವಾರ ವೇಳಾಪಟ್ಟಿ ಪ್ರಕಟವಾಗುವ ಸಾಧ್ಯತೆ ಇದೆ.
ಪಶ್ಚಿಮ ಬಂಗಾಳದಲ್ಲಿ ಮೇ 7 ರಂದು, ತಮಿಳುನಾಡಿನಲ್ಲಿ ಮೇ 10 ರಂದು, ಅಸ್ಸಾಂನಲ್ಲಿ ಮೇ 20 ರಂದು, ಕೇರಳದಲ್ಲಿ ಮೇ 23 ರಂದು ಮತ್ತು ಪುದುಚೆರಿಯಲ್ಲಿ ಜೂನ್ 15 ರಂದು ವಿಧಾನಸಭೆಗಳ ಅವಧಿ ಕೊನೆಗೊಳ್ಳಲಿದೆ.
ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ನೇತೃತ್ವದ ತಂಡವು ಮೂರು ರಾಜ್ಯಗಳಿಗೆ ಈಗಾಗಲೇ ಭೇಟಿ ನೀಡಿ ಚುನಾವಣಾ ಪೂರ್ವಸಿದ್ಧತೆಗಳನ್ನು ಪರಿಶೀಲಿಸಿದೆ. ತಂಡವು ಮಾರ್ಚ್ 6 ಹಾಗೂ 7ರಂದು ಕೇರಳಕ್ಕೆ, ಪಶ್ಚಿಮ ಬಂಗಾಳಕ್ಕೆ ಮಾರ್ಚ್ 9 ಹಾಗೂ 10ರಂದು ಭೇಟಿ ನೀಡಲಿದೆ.
ಮೂಲಗಳ ಪ್ರಕಾರ, ಚುನಾವಣಾ ಆಯೋಗವು ಮುಂದಿನ ವಾರದ ಆರಂಭದಲ್ಲಿ ವೇಳಾಪಟ್ಟಿ ಪ್ರಕಟಿಸುವ ಸಂಭವ ಇದೆ. ಮತದಾರರ ಪಟ್ಟಿಯ ಸಮಗ್ರ ವಿಶೇಷ ಪರಿಷ್ಕರಣೆ (ಎಸ್‌ಐಆರ್) ನಂತರ ಈ ರಾಜ್ಯಗಳಲ್ಲಿ ನಡೆಯುತ್ತಿರುವ ಮೊದಲ ಚುನಾವಣೆಯಾಗಿದೆ.
2021ರಲ್ಲಿ ಪಶ್ಚಿಮ ಬಂಗಾಳದಲ್ಲಿ ಎಂಟು ಹಂತದಲ್ಲಿ ಹಾಗೂ ಅಸ್ಸಾಂನಲ್ಲಿ ಮೂರು ಹಂತದಲ್ಲಿ ಚುನಾವಣೆ ನಡೆದಿದ್ದರೆ, ಉಳಿದ ಮೂರು ರಾಜ್ಯಗಳಲ್ಲಿ ಒಂದೇ ಹಂತದಲ್ಲಿ ಚುನಾವಣೆ ನಡೆದಿತ್ತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.