ADVERTISEMENT

ಬಣ ರಾಜಕಾರಣ, ಹಸ್ತಕ್ಷೇಪ, ಬೇಕಾಬಿಟ್ಟಿ ಹೇಳಿಕೆ ನೀಡಿದರೆ ಕ್ರಮ: ಬಿಜೆಪಿ ಹೈಕಮಾಂಡ್

​ಪ್ರಜಾವಾಣಿ ವಾರ್ತೆ
Published 3 ಏಪ್ರಿಲ್ 2023, 14:16 IST
Last Updated 3 ಏಪ್ರಿಲ್ 2023, 14:16 IST
ಬೆಳಗಾವಿಯಲ್ಲಿ ಸೋಮವಾರ ನಡೆದ ಬಿಜೆಪಿ ಜಿಲ್ಲಾ ಕೋರ್‌ ಕಮಿಟಿ ಸಭೆಯಲ್ಲಿ ಸಚಿವ ಪ್ರಲ್ಹಾದ ಜೋಶಿ, ಚಿಕ್ಕೊಡಿ ಜಿಲ್ಲಾ ಘಟಕದ ಅಧ್ಯಕ್ಷ ಡಾ.ರಾಜೇಶ ನೇರ್ಲಿ, ರಾಜ್ಯ ಘಟಕದ ಉಪಾಧ್ಯಕ್ಷ ನಿರ್ಮಲಕುಮಾರ ಸುರಾನಾ ಮಾತುಕತೆ ನಡೆಸಿದರು  / ಪ್ರಜಾವಾಣಿ ಚಿತ್ರ
ಬೆಳಗಾವಿಯಲ್ಲಿ ಸೋಮವಾರ ನಡೆದ ಬಿಜೆಪಿ ಜಿಲ್ಲಾ ಕೋರ್‌ ಕಮಿಟಿ ಸಭೆಯಲ್ಲಿ ಸಚಿವ ಪ್ರಲ್ಹಾದ ಜೋಶಿ, ಚಿಕ್ಕೊಡಿ ಜಿಲ್ಲಾ ಘಟಕದ ಅಧ್ಯಕ್ಷ ಡಾ.ರಾಜೇಶ ನೇರ್ಲಿ, ರಾಜ್ಯ ಘಟಕದ ಉಪಾಧ್ಯಕ್ಷ ನಿರ್ಮಲಕುಮಾರ ಸುರಾನಾ ಮಾತುಕತೆ ನಡೆಸಿದರು / ಪ್ರಜಾವಾಣಿ ಚಿತ್ರ   

ಬೆಳಗಾವಿ: ಬಣ ರಾಜಕಾರಣ ಮಾಡುವಂತಿಲ್ಲ, ಬೇರೊಬ್ಬರ ಕ್ಷೇತ್ರದಲ್ಲಿ ಹಸ್ತಕ್ಷೇ‍ಪ ಅಕ್ಷಮ್ಯ, ಅನುಮತಿ ಇಲ್ಲದೇ ಬಹಿರಂಗ ಹೇಳಿಕೆ ನೀಡಿದರೆ ದಿಟ್ಟ ಕ್ರಮ...

ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಪ್ರಲ್ಹಾದ ಜೋಶಿ ಹಾಗೂ ಬಿಜೆಪಿ ರಾಜ್ಯ ಘಟಕದ ಉಪಾಧ್ಯಕ್ಷ ನಿರ್ಮಲಕುಮಾರ ಸುರಾನಾ ಅವರ ನೇತೃತ್ವದಲ್ಲಿ, ನಗರದಲ್ಲಿ ಸೋಮವಾರ ನಡೆದ ಬಿಜೆಪಿ ಜಿಲ್ಲಾ ಕೋರ್‌ ಕಮಿಟಿ ಸಭೆಯಲ್ಲಿ ಈ ಮೂರೂ ವಿಷಯಗಳು ತೀವ್ರ ಚರ್ಚೆಗೆ ಒಳಗಾದವು ಎಂದು ಪಕ್ಷದ ಮೂಲಗಳು ಮಾಹಿತಿ ನೀಡಿವೆ.

ಟಿಕೆಟ್‌ ಆಕಾಂಕ್ಷಿಗಳ ಅಭಿಪ್ರಾಯ ಸಂಗ್ರಹ, ಬಂಡಾಯ ಶಮನ ಹಾಗೂ ಗುಂಪುಗಾರಿಕೆಗೆ ತಡೆಯೊಡ್ಡುವ ಹಿನ್ನೆಲೆಯಲ್ಲಿ ಈ ಸಭೆ ಮಹತ್ವ ಪಡೆದಿತ್ತು.

ADVERTISEMENT

ಶಾಸಕ ರಮೇಶ ಜಾರಕಿಹೊಳಿ ಹಾಗೂ ವಿಧಾನ ಪರಿಷತ್‌ ಸದಸ್ಯ ಲಕ್ಷ್ಮಣ ಸವದಿ ಬಣ ರಾಜಕಾರಣ ಬಿಡಬೇಕು. ಬೇರೊಬ್ಬರ ಕ್ಷೇತ್ರದಲ್ಲಿ ಹಸ್ತಕ್ಷೇಪ ಮಾಡುವುದನ್ನು ರಮೇಶ ಜಾರಕಿಹೊಳಿ ನಿಲ್ಲಿಸಬೇಕು. ಅಲ್ಲದೇ, ಮಾಧ್ಯಮಗಳ ಮುಂದೆ ಹೇಳಿಕೆ ನೀಡುವ ಮುನ್ನ ವರಿಷ್ಠರ ಅನುಮತಿ ಪಡೆಯುವುದು ಎಲ್ಲರಿಗೂ ಕಡ್ಡಾಯ. ಬೇಕಾಬಿಟ್ಟಿ ಹೇಳಿಕೆ ನೀಡಿದರೆ ಶಿಸ್ತುಕ್ರಮ ಕಟ್ಟಿಟ್ಟಬುತ್ತಿ ಎಂಬ ಸಂದೇಶವನ್ನು ಹೈಕಮಾಂಡ್‌ ನೀಡಿದೆ. ಪ್ರಹ್ಲಾದ ಜೋಶಿ ಇದನ್ನು ಎಲ್ಲರಿಗೂ ಮನವರಿಕೆ ಮಾಡಿದರು ಎಂದೂ ಮೂಲಗಳು ಹೇಳಿವೆ.

ಅಥಣಿಯೂ ಸೇರಿದಂತೆ ಜಿಲ್ಲೆಯ ಏಳು ಕ್ಷೇತ್ರಗಳಲ್ಲಿ ತಾವು ಹೇಳಿದವರಿಗೆ ಟಿಕೆಟ್‌ ನೀಡಬೇಕು ಎಂದು ರಮೇಶ ಜಾರಕಿಹೊಳಿ ಪಟ್ಟು ಹಿಡಿದಿದ್ದಾರೆ. ಈ ಸಂಬಂಧ ಲಕ್ಷ್ಮಣ ಸವದಿ, ಸಂಸದರಾದ ಅಣ್ಣಾಸಾಹೇಬ ಜೊಲ್ಲೆ, ಸಂಸದ ಈರಣ್ಣ ಕಡಾಡಿ ಸೇರಿದಂತೆ ಹಲವು ನಾಯಕರು ಬಹಿರಂಗವಾಗಿ ಟೀಕಾಪ್ರಹಾರ ಮಾಡಿದ್ದನ್ನು ಸ್ಮರಿಸಬಹುದು

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.