ಕಾಲೇಜು ಶಿಕ್ಷಣ ಮತ್ತು ತಾಂತ್ರಿಕ ಶಿಕ್ಷಣ ಇಲಾಖೆಗಳಲ್ಲಿ ಖಾಲಿ ಇರುವ 2,000 ಬೋಧಕ ಮತ್ತು ಬೋಧಕೇತರ ಹುದ್ದೆಗಳಿಗೆ ಶೀಘ್ರವೇ ನೇಮಕಾತಿ ಪ್ರಕ್ರಿಯೆ ಆರಂಭಿಸಲಾಗುವುದು. ರಾಜ್ಯದ ಹಲವು ಎಂಜಿನಿಯರಿಂಗ್ ಕಾಲೇಜುಗಳಲ್ಲಿ ಹುದ್ದೆಗಳ ಕೊರತೆ ಇದೆ. ಎಲ್ಲ ಹುದ್ದೆಗಳ ಭರ್ತಿಗೆ ಮುಖ್ಯಮಂತ್ರಿಯವರು ಒಪ್ಪಿಗೆ ನೀಡಿದ್ದಾರೆ.
ಕಾಂಗ್ರೆಸ್‌ನ ರಾಘವೇಂದ್ರ ಹಿಟ್ನಾಳ್ ಅವರ ಪ್ರಶ್ನೆಗೆ ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ.ಸುಧಾಕರ್ ಉತ್ತರ
ಪದವಿ ಕಾಲೇಜುಗಳ ಪ್ರಾಂಶುಪಾಲರ ಹುದ್ದೆಯನ್ನು ನೇರ ನೇಮಕಾತಿ ಮೂಲಕ ಭರ್ತಿ ಮಾಡಲಾಗುತ್ತಿದ್ದು, ಮೆರಿಟ್ ಪಟ್ಟಿಯಲ್ಲಿನ ಅಭ್ಯರ್ಥಿಗಳಿಂದ ಸ್ವೀಕೃತಗೊಂಡ ದಾಖಲೆಗಳು ಪರಿಶೀಲನೆ ಹಂತದಲ್ಲಿವೆ. ಶೀಘ್ರವಾಗಿ ತಾತ್ಕಾಲಿಕ ಪಟ್ಟಿ ಪ್ರಕಟಿಸಲು ಕ್ರಮ ವಹಿಸಲಾಗುವುದು. ವಿವಿಧ ಇಲಾಖೆಗಳಿಗೆ ನಿಯೋಜನೆ ಮೇಲೆ ಹೋಗಿರುವ ಪ್ರಾಧ್ಯಾಪಕರನ್ನು ವಾಪಸ್ ಕರೆಸಿಕೊಳ್ಳಲು ಕ್ರಮ ತೆಗೆದುಕೊಳ್ಳಲಾಗುವುದು
ಬಿಜೆಪಿಯ ಬಸನಗೌಡ ಪಾಟೀಲ ಯತ್ನಾಳ ಅವರ ಪ್ರಶ್ನೆಗೆ ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ.ಸುಧಾಕರ್ ಉತ್ತರ
ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ ತಜ್ಞರು, ಸಾಮಾನ್ಯ ಕರ್ತವ್ಯ ವೈದ್ಯಾಧಿಕಾರಿ ಹಾಗೂ ದಂತ ವೈದ್ಯ ಆರೋಗ್ಯ ಅಧಿಕಾರಿಗಳನ್ನು ನೇಮಕ ಮಾಡಲು ಕ್ರಮ ಕೈಗೊಳ್ಳಲಾಗುವುದು. ಖಾಲಿ ಇರುವ 120 ತಜ್ಞ ವೈದ್ಯರು ಹಾಗು 100 ಸಾಮಾನ್ಯ ಕರ್ತವ್ಯ ವೈದ್ಯಾಧಿಕಾರಿ ಹುದ್ದೆಗಳ ಭರ್ತಿಗೆ ಆರ್ಥಿಕ ಇಲಾಖೆ ಸಹಮತಿ ನೀಡಿದೆ.
ಕಾಂಗ್ರೆಸ್‌ನ ವಿಜಯಾನಂದ ಕಾಶಪ್ಪನವರ ಪ್ರಶ್ನೆಗೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಉತ್ತರ
ರಾಜ್ಯದಲ್ಲಿ ಔಷಧ ಕೊರತೆಯನ್ನು ನೀಗಿಸುವ ನಿಟ್ಟಿನಲ್ಲಿ ಆರೋಗ್ಯ ಇಲಾಖೆ ಹಲವು ಕ್ರಮಗಳನ್ನು ಕೈಗೊಂಡಿದೆ. ಔಷಧಿಗಳ ಪಟ್ಟಿಯನ್ನು 732ರಿಂದ 1,032ಕ್ಕೆ ಹೆಚ್ಚಿಸಲಾಗಿದೆ. ಕೆಲವು ಔಷಧಗಳ ಕೊರತೆಗೆ ಟೆಂಡರ್‌ಗಳಲ್ಲಿ ಯಾರೂ ಭಾಗವಹಿಸದೇ ಇರುವುದು ಮುಖ್ಯ ಕಾರಣ. ಈ ಔಷಧಗಳ ಮೌಲ್ಯ ಮತ್ತು ಪ್ರಮಾಣ ಕಡಿಮೆ ಇರುವುದರಿಂದ ಹಲವಾರು ಬಾರಿ ಟೆಂಡರ್ ಕರೆದರೂ ಯಾರೂ ಸ್ಪಂದಿಸಿಲ್ಲ. ಹೀಗಾಗಿ ಔಷಧ ಸರಬರಾಜು, ಖರೀದಿ ಪ್ರಕ್ರಿಯೆಯ ಟೆಂಡರ್ ಷರತ್ತುಗಳನ್ನು ಸರಳೀಕರಣ ಮಾಡಿ ಔಷಧಗಳನ್ನು ಸರಬರಾಜು ಮಾಡಲು ಹೆಚ್ಚಿನ ಬಿಡ್‌ದಾರರು ಭಾಗವಹಿಸಲು ಕ್ರಮ ವಹಿಸಲಾಗುತ್ತಿದೆ.
ಬಿಜೆಪಿ ಡಾ.ಸಿ.ಎನ್.ಅಶ್ವತ್ಥನಾರಾಯಣ ಅವರ ಪ್ರಶ್ನೆಗೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಉತ್ತರ
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.