ADVERTISEMENT

ವಿಧಾನಸಭೆ: ಗಾಂಧೀಜಿ ಭೇಟಿ ನೀಡಿದ ಜಾಗಗಳ ಅಭಿವೃದ್ಧಿಗೆ ನಿರ್ಣಯ

​ಪ್ರಜಾವಾಣಿ ವಾರ್ತೆ
Published 14 ಡಿಸೆಂಬರ್ 2023, 16:26 IST
Last Updated 14 ಡಿಸೆಂಬರ್ 2023, 16:26 IST
<div class="paragraphs"><p>ಬೆಳಗಾವಿಯ ಸುವರ್ಣ ವಿಧಾನಸೌಧ</p></div>

ಬೆಳಗಾವಿಯ ಸುವರ್ಣ ವಿಧಾನಸೌಧ

   

ವಿಧಾನಸಭೆ: ಮಹಾತ್ಮಾಗಾಂಧೀಜಿಯವರು ಬೆಳಗಾವಿ ಕಾಂಗ್ರೆಸ್ ಅಧಿವೇಶನದಲ್ಲಿ ಭಾಗವಹಿಸಿ 100 ವರ್ಷ ತುಂಬುತ್ತಿರುವ ನೆನಪಿನಲ್ಲಿ ಸ್ಮಾರಕ ನಿರ್ಮಾಣ ಮತ್ತು ಗಾಂಧಿಯವರು ಭೇಟಿ ನೀಡಿದ ಸ್ಥಳಗಳ ಅಭಿವೃದ್ಧಿಗೆ ವಿಶೇಷ ಅನುದಾನ ಒದಗಿಸಲು ಸರ್ವಾನುಮತದ ನಿರ್ಣಯವನ್ನು ತೆಗೆದುಕೊಳ್ಳಲಾಯಿತು.

ಬಿಜೆಪಿಯ ಅಭಯಪಾಟೀಲ ಅವರು ಈ ಕುರಿತು ಖಾಸಗಿ ನಿರ್ಣಯವನ್ನು ಮಂಡಿಸಿ, ರಾಜ್ಯ ಮತ್ತು ಕೇಂದ್ರ ಸರ್ಕಾರ ಇದಕ್ಕಾಗಿ ತಲಾ ₹100 ಕೋಟಿಯನ್ನು ನೀಡಬೇಕು. ಇದಕ್ಕೆ ಸಮಗ್ರ ಯೋಜನೆ ರೂಪಿಸಬೇಕು ಎಂದು ತಿಳಿಸಿದರು.

ADVERTISEMENT

ಇದಕ್ಕೆ ಪ್ರತಿಕ್ರಿಯಿಸಿದ ಕನ್ನಡ ಮತ್ತು ಸಂಸ್ಕೃತಿ ಸಚಿವ ಶಿವರಾಜ ತಂಗಡಗಿ ಅವರು, ಸ್ಮಾರಕ ನಿರ್ಮಾಣ ಮತ್ತು ಅಭಿವೃದ್ಧಿ ಕಾರ್ಯಗಳನ್ನು ಹಂತ ಹಂತವಾಗಿ ಕೈಗೆತ್ತಿಕೊಳ್ಳಬಹುದು. ಕೇಂದ್ರದ ಮೇಲೂ ಒತ್ತಡ ಹೇರಬಹುದು ಎಂದು ಹೇಳಿದರು. 

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.