ADVERTISEMENT

ಅಟಲ್‌ ಭೂಜಲ ಯೋಜನೆ | 771 ಕಾಮಗಾರಿ ಪ್ರಗತಿಯಲ್ಲಿ: ಕೇಂದ್ರ

​ಪ್ರಜಾವಾಣಿ ವಾರ್ತೆ
Published 13 ಫೆಬ್ರುವರಿ 2025, 13:45 IST
Last Updated 13 ಫೆಬ್ರುವರಿ 2025, 13:45 IST
<div class="paragraphs"><p>ಅಟಲ್ ಭೂಜಲ ಯೋಜನೆಯಲ್ಲಿ ಚೆಕ್ ಡ್ಯಾಂ ಪ್ರಾರಂಭದ ಹಂತದಲ್ಲಿರುವುದು</p></div>

ಅಟಲ್ ಭೂಜಲ ಯೋಜನೆಯಲ್ಲಿ ಚೆಕ್ ಡ್ಯಾಂ ಪ್ರಾರಂಭದ ಹಂತದಲ್ಲಿರುವುದು

   

ನವದೆಹಲಿ: ಕರ್ನಾಟಕದ 14 ಜಿಲ್ಲೆಗಳ 1,199 ಗ್ರಾಮ ಪಂಚಾಯಿತಿಗಳಲ್ಲಿ ಅಟಲ್ ಭೂಜಲ್ ಯೋಜನೆಯನ್ನು ಜಾರಿಗೊಳಿಸಲಾಗುತ್ತಿದೆ ಎಂದು ಕೇಂದ್ರ ಜಲಶಕ್ತಿ ಸಚಿವ ಸಿ.ಆರ್.ಪಾಟೀಲ ತಿಳಿಸಿದರು. 

ಮೈಸೂರು ಸಂಸದ ಯದುವೀರ್ ಒಡೆಯರ್‌ ಲೋಕಸಭೆಯಲ್ಲಿ ಪ್ರಶ್ನೋತ್ತರ ಅವಧಿಯಲ್ಲಿ ಕೇಳಿದ  ಪ್ರಶ್ನೆಗೆ ಉತ್ತರಿಸಿದ ಸಚಿವರು, ‘ಈ ಯೋಜನೆಯಡಿ ಅಂತರ್ಜಲ ಮರುಪೂರಣ ಮತ್ತು ಸಂರಕ್ಷಣಾ ಚಟುವಟಿಕೆಗಳನ್ನು ಕೈಗೊಳ್ಳಲಾಗುತ್ತಿದೆ’ ಎಂದರು. 

ADVERTISEMENT

ಈ ಯೋಜನೆಯಡಿ ರಾಜ್ಯದಲ್ಲಿ ಒಟ್ಟು 2,478 ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲಾಗಿದ್ದು, ಅವುಗಳಲ್ಲಿ 1,707 ಪೂರ್ಣಗೊಂಡಿವೆ. 771 ಕಾಮಗಾರಿಗಳು ಪ್ರಗತಿಯಲ್ಲಿವೆ ಎಂದರು. 

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.