ಬೆಂಗಳೂರು: ಮಾಜಿ ಪ್ರಧಾನಿ ಅಟಲ್‌ಬಿಹಾರಿ ವಾಜಪೇಯಿ ಅವರ ಜನ್ಮಶತಮಾನೋತ್ಸವ ಕಾರ್ಯಕ್ರಮವನ್ನು ಶನಿವಾರ ನಗರದ ಪುರಭವನದಲ್ಲಿ ಹಮ್ಮಿಕೊಳ್ಳಲಾಗಿದೆ. ಅಟಲ್ ಅವರ ಜೀವನ ಮತ್ತು ಸಾಧನೆಯನ್ನು ಒಳಗೊಂಡ ಸ್ಮರಣ ಸಂಚಿಕೆ ಬಿಡುಗಡೆ ಮಾಡಲಾಗುವುದು ಎಂದು ವಿಧಾನಪರಿಷತ್ತಿನ ಮಾಜಿ ಸದಸ್ಯ ಡಾ.ಎ.ಎಚ್.ಶಿವಯೋಗಿಸ್ವಾಮಿ ತಿಳಿಸಿದರು.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸ್ಮರಣ ಸಂಚಿಕೆಯನ್ನು ಎಲ್ಲ ಜನರಿಗೂ ಅದರಲ್ಲೂ ವಿಶೇಷವಾಗಿ ಯುವಜನರಿಗೆ ತಲುಪಿಸಲಾಗುವುದು ಎಂದು ಹೇಳಿದರು.
ಈ ಕಾರ್ಯಕ್ರಮದ ಅಂಗವಾಗಿ ಶನಿವಾರ ಚಿತ್ರನಮನ ಸ್ಪರ್ಧೆ ಮತ್ತು ಸ್ವರ ನಮನ ನಡೆಯಲಿದೆ. ಅಲ್ಲದೇ, ಈಗಾಗಲೇ ರಂಗೋಲಿ ನಮನ ಸ್ಪರ್ಧೆ, ನುಡಿ ನಮನ ಸ್ಪರ್ಧೆ, ಬರಹ ನಮನ ಸ್ಪರ್ಧೆಗಳು ನಡೆದಿದ್ದು, ಅದರಲ್ಲಿ ವಿಜೇತರಾದವರಿಗೆ ಬಹುಮಾನ ವಿತರಿಸಲಾಗುವುದು ಎಂದು ತಿಳಿಸಿದರು.
ಕಾರ್ಯಕ್ರಮದಲ್ಲಿ ಬಿಜೆಪಿ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್.ಸಂತೋಷ್, ರಾಜ್ಯ ಘಟಕದ ಅಧ್ಯಕ್ಷ ಬಿ.ವೈ.ವಿಜಯೇಂದ್ರ, ಮಾಜಿ ಮುಖ್ಯಮಂತ್ರಿ ಡಿ.ವಿ.ಸದಾನಂದಗೌಡ, ವಿರೋಧ ಪಕ್ಷದ ನಾಯಕರಾದ ಆರ್.ಅಶೋಕ, ಛಲವಾದಿ ನಾರಾಯಣಸ್ವಾಮಿ, ತೇಜಸ್ವಿನಿ ಅನಂತಕುಮಾರ್, ಬೆಂಗಳೂರಿನ ಎಲ್ಲ ಸಂಸದರು ಮತ್ತು ಶಾಸಕರು ಭಾಗವಹಿಸಲಿದ್ದಾರೆ ಎಂದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.