ಬಾಂಗ್ಲಾದೇಶದಲ್ಲಿ ಹಿಂದೂಗಳ ಮೇಲೆ ನಡೆಯುತ್ತಿರುವ ದೌರ್ಜನ್ಯ ನಿಲ್ಲಬೇಕು ಮತ್ತು ಹಿಂದೂಗಳಿಗೆ ರಕ್ಷಣೆ ನೀಡಬೇಕು ಎಂದು ಆಗ್ರಹಿಸಿ ಹಿಂದೂ ಹಿತರಕ್ಷಣಾ ಸಮಿತಿ ನೇತೃತ್ವದಲ್ಲಿ ಮಂಗಳೂರಿನಲ್ಲಿ ಮೆರವಣಿಗೆ ನಡೆಯಿತು. ಸಾಧು ಸಂತರ ರಕ್ಷಣೆ ಆಗಬೇಕು, ಮಾನವ ಹಕ್ಕು ರಕ್ಷಿಸಬೇಕು ಎಂದು ಪ್ರತಿಭಟನಕಾರರು ಘೋಷಣೆ ಕೂಗಿದರು. ಇದೇ ರೀತಿ, ದಾವಣಗೆರೆ, ರಾಯಚೂರು ಸೇರಿದಂತೆ ರಾಜ್ಯದ ವಿವಿಧೆಡೆ ಹಿಂದೂ ರಕ್ಷಣಾ ವೇದಿಕೆ, ವಿಶ್ವ ಹಿಂದೂ ಪರಿಷತ್ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.