ADVERTISEMENT

ಲೇಖಕರ ಸಂಭಾವನೆ ಜಿಎಸ್‌ಟಿ ಕೈಬಿಡುವಂತೆ ಆಗ್ರಹ

​ಪ್ರಜಾವಾಣಿ ವಾರ್ತೆ
Published 2 ಜೂನ್ 2020, 20:51 IST
Last Updated 2 ಜೂನ್ 2020, 20:51 IST
ಮನು ಬಳಿಗಾರ್
ಮನು ಬಳಿಗಾರ್   

ಬೆಂಗಳೂರು: ಪ್ರಕಾಶಕರು ತಾವು ಪ್ರಕಟ ಮಾಡುವ ಪುಸ್ತಕದ ಲೇಖಕರಿಗೆ ನೀಡುವ ಸಂಭಾವನೆ ಮೇಲೆ ವಿಧಿಸಲಾಗುತ್ತಿರುವ ಶೇ 12 ರಷ್ಟುಸರಕು ಮತ್ತು ಸೇವಾ ತೆರಿಗೆಯನ್ನು (ಜಿಎಸ್‌ಟಿ) ಕೈಬಿಡುವಂತೆ ಕನ್ನಡ ಸಾಹಿತ್ಯ ಪರಿಷತ್ತು (ಕಸಾಪ) ಕೇಂದ್ರ ಹಾಗೂ ರಾಜ್ಯ ಸರ್ಕಾರಕ್ಕೆ ಒತ್ತಾಯಿಸಿದೆ.

ಪುಸ್ತಕೋದ್ಯಮ ಅತ್ಯಂತ ಸಂಕಷ್ಟದ ಪರಿಸ್ಥಿತಿ ಎದುರಿಸುತ್ತಿದ್ದು, ಜಿಎಸ್‌ಟಿ ಪ್ರಕಾಶಕರಿಗೆ ಹೊರೆಯಾಗಿದೆ ಎಂದು ಕರ್ನಾಟಕ ಪ್ರಕಾಶಕರ ಸಂಘದ ಅಧ್ಯಕ್ಷ ಪ್ರಕಾಶ್ ಕಂಬತ್ತಳ್ಳಿ ಅವರು ಪರಿಷತ್ತಿಗೆ ಪತ್ರ ಬರೆದಿದ್ದರು. ಈ ಹಿನ್ನೆಲೆಯಲ್ಲಿ ಪರಿಷತ್ತಿನ ಅಧ್ಯಕ್ಷ ಮನು ಬಳಿಗಾರ್ ಅವರು ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್, ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹಾಗೂ ಮುಖ್ಯ ಕಾರ್ಯದರ್ಶಿ ಟಿ.ಎಂ. ವಿಜಯ್ ಭಾಸ್ಕರ್ ಅವರಿಗೆ ಪತ್ರ ಬರೆದಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT