ಬೆಂಗಳೂರು: ಕನ್ನಡ ಸಾಹಿತ್ಯ ಪರಿಷತ್ತು (ಕಸಪಾ) ನೀಡುವ ‘ಡಾ.ಟಿ.ವಿ. ವೆಂಕಟಾಚಲಶಾಸ್ತ್ರಿ ವಿದ್ವತ್ ದತ್ತಿ ಪ್ರಶಸ್ತಿ’ಗೆ ಹಿರಿಯ ಸಂಶೋಧಕ ಡಾ.ಎ.ವಿ. ನಾವಡ ಆಯ್ಕೆಯಾಗಿದ್ದಾರೆ.
ಪರಿಷತ್ತಿನ ಅಧ್ಯಕ್ಷ ಮನು ಬಳಿಗಾರ್ ನೇತೃತ್ವದ ಆಯ್ಕೆ ಸಮಿತಿಯು ಶುಕ್ರವಾರ ಈ ಆಯ್ಕೆ ಮಾಡಿದೆ. ಪ್ರಶಸ್ತಿಯು ₹ 10 ಸಾವಿರ ನಗದು ಹಾಗೂ ಫಲಕವನ್ನು ಒಳಗೊಂಡಿದೆ. ಕನ್ನಡ ಮತ್ತು ತುಳು ಭಾಷೆಯ ವಿದ್ವಾಂಸರಾಗಿರುವ ನಾವಡ ಅವರು, ಕಳೆದ ಐದು ದಶಕಗಳಿಂದ ಸಾಹಿತ್ಯ ಸಂಶೋಧನೆಯಲ್ಲಿ ತೊಡಗಿಕೊಂಡಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.