ಬೆಂಗಳೂರು:ರಾಜ್ಯ ಸರ್ಕಾರವು ಸಂಗೀತ ಕ್ಷೇತ್ರದಲ್ಲಿ ಸಾಧನೆ ಮಾಡಿದವರಿಗೆ ನೀಡುವ‘ರಾಜ್ಯ ಸಂಗೀತ ವಿದ್ವಾನ್ ಗೌರವ ಪ್ರಶಸ್ತಿ’ಗೆ ಮೃದಂಗ ವಿದ್ವಾಂಸ ಎ.ವಿ. ಆನಂದ್ ಆಯ್ಕೆಯಾಗಿದ್ದಾರೆ.
ಈ ಪ್ರಶಸ್ತಿಯು ₹ 5 ಲಕ್ಷ ನಗದು ಹಾಗೂ ಸರಸ್ವತಿ ಪುತ್ಥಳಿಯನ್ನು ಒಳಗೊಂಡಿದೆ. ಇದೇ 7ರಂದು ಮೈಸೂರಿನಲ್ಲಿ ನಡೆಯುವ ದಸರಾ ಉದ್ಘಾಟನಾ ಕಾರ್ಯಕ್ರಮದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದು ಪ್ರಕಟಣೆ ತಿಳಿಸಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.