ಹೊನ್ನಾವರ (ಉತ್ತರ ಕನ್ನಡ): ಯಕ್ಷಗಾನ ಕಲಾವಿದ ದಿ.ಕೆರೆಮನೆ ಶಿವರಾಮ ಹೆಗಡೆ ಅವರ ನೆನಪಿನಲ್ಲಿ ಶ್ರೀ ಇಡಗುಂಜಿ ಮಹಾಗಣಪತಿ ಯಕ್ಷಗಾನ ಮಂಡಳಿಯು ನೀಡುವ ‘ಕೆರೆಮನೆ ಶಿವರಾಮ ಹೆಗಡೆ’ ಪ್ರಶಸ್ತಿಯನ್ನು ಪ್ರಸಿದ್ಧ ರಂಗ ಕಲಾವಿದೆ ಬಿ.ಜಯಶ್ರೀ ಅವರಿಗೆ ಘೋಷಿಸಲಾಗಿದೆ.
ಪ್ರಶಸ್ತಿಯು ₹ 25 ಸಾವಿರ ನಗದು ಹಾಗೂ ಪ್ರಶಸ್ತಿ ಪತ್ರ ಒಳಗೊಂಡಿದೆ. ಪ್ರಸಿದ್ಧ ಸ್ತ್ರೀ ವೇಷಧಾರಿ ದಿ.ಕೆರೆಮನೆ ಗಜಾನನ ಹೆಗಡೆ ಅವರ ಸ್ಮರಣೆಯಲ್ಲಿ ಇದೇ ಮಂಡಳಿ ನೀಡುವ ವಾರ್ಷಿಕ ‘ಕೆರೆಮನೆ ಗಜಾನನ ಹೆಗಡೆ ಪ್ರಶಸ್ತಿ’ಗೆ ಯಕ್ಷಗಾನದ ಹಿರಿಯ ಭಾಗವತ ಕಪ್ಪೆಕೆರೆ ಸುಬ್ರಾಯ ಭಾಗವತ ಅವರನ್ನು ಆಯ್ಕೆ ಮಾಡಲಾಗಿದೆ. ಪ್ರಶಸ್ತಿಯು ₹ 15 ಸಾವಿರ ನಗದು, ಪ್ರಶಸ್ತಿ ಪತ್ರ ಒಳಗೊಂಡಿದೆ.
ಏ.2 ಹಾಗೂ 3ರಂದು ಗುಣವಂತೆಯ ಯಕ್ಷಾಂಗಣದಲ್ಲಿ ನಡೆಯಲಿರುವ ಕೆರೆಮನೆ ಶಂಭು ಹೆಗಡೆ ರಾಷ್ಟ್ರೀಯ ನಾಟ್ಯೋತ್ಸವದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದು ನಾಟ್ಯೋತ್ಸವ ಸಮಿತಿಯ ಕಾರ್ಯಾಧ್ಯಕ್ಷ ಲಕ್ಷ್ಮೀನಾರಾಯಣ ಕಾಶಿ, ಮಂಡಳಿಯ ನಿರ್ದೇಶಕ ಕೆರೆಮನೆ ಶಿವಾನಂದ ಹೆಗಡೆ ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.