ADVERTISEMENT

ಮನು ಬಳಿಗಾರ್‌ಗೆ ‘ಪು.ತಿ.ನ. ಪುರಸ್ಕಾರ’

​ಪ್ರಜಾವಾಣಿ ವಾರ್ತೆ
Published 29 ಅಕ್ಟೋಬರ್ 2021, 3:32 IST
Last Updated 29 ಅಕ್ಟೋಬರ್ 2021, 3:32 IST
ಮನು ಬಳಿಗಾರ್‌
ಮನು ಬಳಿಗಾರ್‌   

ಬೆಂಗಳೂರು: ಎಸ್‌.ಕೆ.ಎಫ್‌. ಕಾರ್ಮಿಕರ ಸಂಘ ನೀಡುವ ಈ ಸಾಲಿನ ‘ಪು.ತಿ.ನ. ಪುರಸ್ಕಾರ’ಕ್ಕೆ ಕನ್ನಡ ಸಾಹಿತ್ಯ ಪರಿಷತ್ತಿನ ನಿಕಟಪೂರ್ವ ಅಧ್ಯಕ್ಷ ಮನು ಬಳಿಗಾರ್ ಆಯ್ಕೆಯಾಗಿದ್ದಾರೆ.

ಈ ಪ್ರಶಸ್ತಿಯು ₹ 10 ಸಾವಿರ ನಗದು ಹಾಗೂ ಫಲಕವನ್ನು ಒಳಗೊಂಡಿದೆ. ಕನ್ನಡ ಸಾಹಿತ್ಯ ಮತ್ತು ಸಾಂಸ್ಕೃತಿಕ ಕ್ಷೇತ್ರದಲ್ಲಿ ಅನುಪಮ ಸೇವೆ ಸಲ್ಲಿಸಿದವರಿಗೆ ಹಲವು ವರ್ಷಗಳಿಂದ ಈ ಪುರಸ್ಕಾರವನ್ನು ನೀಡಲಾಗುತ್ತಿದೆ.

ಕನ್ನಡ ರಾಜ್ಯೋತ್ಸವದ ಪ್ರಯುಕ್ತ ನ.1ರಂದು ಹೊಸೂರು ರಸ್ತೆಯಲ್ಲಿರುವ ಎಸ್‌.ಕೆ.ಎಫ್ ಕಾರ್ಖಾನೆಯ ಆವರಣದಲ್ಲಿ ಪ್ರಶಸ್ತಿ ಪ್ರದಾನ ಸಮಾರಂಭ ಹಮ್ಮಿಕೊಳ್ಳಲಾಗಿದೆ ಎಂದು ಪ್ರಕಟಣೆ ತಿಳಿಸಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.