ADVERTISEMENT

ಪುರುಷೋತ್ತಮ ಬಿಳಿಮಲೆಗೆ ಪೊಳಲಿ ಶೀನಪ್ಪ ಹೆಗ್ಡೆ ಪ್ರಶಸ್ತಿ

​ಪ್ರಜಾವಾಣಿ ವಾರ್ತೆ
Published 18 ಜೂನ್ 2019, 14:27 IST
Last Updated 18 ಜೂನ್ 2019, 14:27 IST
ಪುರುಷೋತ್ತಮ ಬಿಳಿಮಲೆ
ಪುರುಷೋತ್ತಮ ಬಿಳಿಮಲೆ   

ಉಡುಪಿ: ಇಲ್ಲಿನ ರಾಷ್ಟ್ರಕವಿ ಗೋವಿಂದ ಪೈ ಸಂಶೋಧನಾ ಕೇಂದ್ರ ನೀಡುವ ‘ಪೊಳಲಿ ಶೀನಪ್ಪ ಹೆಗ್ಡೆ ಮತ್ತು ಎಸ್‌.ಆರ್‌.ಹೆಗ್ಡೆ ಪ್ರಶಸ್ತಿ’ಗೆ ದೆಹಲಿಯ ಜವಾಹರಲಾಲ್‌ ನೆಹರೂ ವಿಶ್ವವಿದ್ಯಾಲಯದ ಕನ್ನಡ ಅಧ್ಯಯನ ಪೀಠದ ಮುಖ್ಯಸ್ಥ, ಜಾನಪದ ತಜ್ಞ ಡಾ.ಪುರುಷೋತ್ತಮ ಬಿಳಿಮಲೆ ಆಯ್ಕೆಯಾಗಿದ್ದಾರೆ.

ಪ್ರಶಸ್ತಿಯು ₹20 ಸಾವಿರ ನಗದುಹಾಗೂ ಪ್ರಶಸ್ತಿ ಫಲಕವನ್ನು ಒಳಗೊಂಡಿದೆ. ಆಗಸ್ಟ್‌ ಮೊದಲ ವಾರದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದು ಕೇಂದ್ರದ ಸಂಯೋಜಕರು ತಿಳಿಸಿದ್ದಾರೆ.

ಡಾ. ಪುರುಷೋತ್ತಮ ಬಿಳಿಮಲೆ ಅವರು ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲ್ಲೂಕಿನ ಪಂಜದವರು. ಭಾರತೀಯ ಜಾನಪದವನ್ನು ಆಳವಾಗಿ ಅಧ್ಯಯನ ಮಾಡಿದ್ದಾರೆ. ಹಲವು ಕೃತಿಗಳನ್ನು ರಚಿಸಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.