ಬೆಂಗಳೂರು: ದೇಶದ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಗಳ ಒಕ್ಕೂಟದ (ಎಎಸ್‌ಆರ್‌ಟಿಯು) 2023-24ನೇ ಸಾಲಿನ ಮೂರು ರಾಷ್ಟ್ರೀಯ ಪ್ರಶಸ್ತಿಗಳನ್ನು ಕೆಎಸ್‌ಆರ್‌ಟಿಸಿ ಮತ್ತು ಒಂದು ರಾಷ್ಟ್ರೀಯ ಪ್ರಶಸ್ತಿಯನ್ನು ಬಿಎಂಟಿಸಿ ಪಡೆದಿವೆ.
ದೇಶದ 62 ಸಾರಿಗೆ ಸಂಸ್ಥೆಗಳ ಸದಸ್ಯತ್ವ ಹೊಂದಿರುವ ಎಎಸ್‌ಆರ್‌ಟಿಯು ಭಾರತ ಸರ್ಕಾರದ ರಸ್ತೆ ಸಾರಿಗೆ ಹಾಗೂ ಹೆದ್ದಾರಿ ಸಚಿವಾಲಯದ ನಿರ್ದೇಶನದಂತೆ ಕಾರ್ಯನಿರ್ವಹಿಸುವ ಸಂಘಟನೆಯಾಗಿದೆ.
ಅಶ್ವಮೇಧ ಬ್ರ್ಯಾಂಡಿಂಗ್, ವರ್ಚಸ್ಸು ಅಭಿವೃದ್ಧಿ, ಕಾರ್ಮಿಕರ ಕಲ್ಯಾಣಕ್ಕಾಗಿ ಕೈಗೊಂಡಿರುವ ವಿನೂತನ ಯೋಜನೆಗಳು ಹಾಗೂ ಗಣಕೀಕರಣಕ್ಕಾಗಿ ಕೆಎಸ್‌ಆರ್‌ಟಿಸಿಗೆ ಮೂರು ಪ್ರಶಸ್ತಿಗಳು ಲಭಿಸಿವೆ.
ಮೆಟ್ರೊ ಫೀಡರ್ ಕ್ಯೂಆರ್ ಕೋಡ್ ಮೂಲಕ ಡಿಜಿಟಲ್ ಪ್ರಯೋಗಕ್ಕಾಗಿ ಬಿಎಂಟಿಸಿಗೆ ಪ್ರಶಸ್ತಿ ನೀಡಲಾಗಿದೆ. ನವದೆಹಲಿಯಲ್ಲಿ ನಿವೃತ್ತ ಐಪಿಎಸ್ ಅಧಿಕಾರಿ ಕಿರಣ್ ಬೇಡಿ ಪ್ರಶಸ್ತಿ ಪ್ರದಾನ ಮಾಡಿದರು.
ಕೆಎಸ್‌ಆರ್‌ಟಿಸಿಯ ಉಪಮುಖ್ಯ ಸಂಚಾರ ವ್ಯವಸ್ಥಾಪಕ ಗುರುರಾಜ್ ಎಚ್, ಕಾರ್ಮಿಕ ಕಲ್ಯಾಣಾಧಿಕಾರಿ ರಾಧಾ, ಬಿಎಂಟಿಸಿಯ ಗಣಕ ಶಾಖೆಯ ಸಹಾಯಕ ಸಂಚಾರ ಅಧೀಕ್ಷಕಿ ಯಶೋದಾ ಪ್ರಶಸ್ತಿ ಸ್ವೀಕರಿಸಿದರು.
ಕೆಎಸ್‌ಆರ್‌ಟಿಸಿಯಲ್ಲಿ 26 ವರ್ಷಗಳಿಂದ ಚಾಲಕ ಕಂ ನಿರ್ವಾಹಕರಾಗಿ ಕರ್ತವ್ಯ ನಿರ್ವಹಿಸುತ್ತಿರುವ ಸುಲೋಚನಾ ದೇವಿ, ಬಿಎಂಟಿಸಿಯಲ್ಲಿ ನಿರ್ವಾಹಕರಾಗಿರುವ ಸವಿತಾ, ಸಿ.ಎನ್. ಕುಸುಮಾ, ಮಂಜುಳಾ ಅವರನ್ನು ಇದೇ ಸಂದರ್ಭದಲ್ಲಿ ಅಂತರರಾಷ್ಟ್ರೀಯ ಮಹಿಳಾ ದಿನಾಚರಣೆಯ ಅಂಗವಾಗಿ ಸನ್ಮಾನಿಸಲಾಯಿತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.