ADVERTISEMENT

ರಾಜ್ಯದೆಲ್ಲೆಡೆ ಸಂಭ್ರಮದ ಆಯುಧ ಪೂಜೆ

​ಪ್ರಜಾವಾಣಿ ವಾರ್ತೆ
Published 18 ಅಕ್ಟೋಬರ್ 2018, 9:56 IST
Last Updated 18 ಅಕ್ಟೋಬರ್ 2018, 9:56 IST
ಬೆಂಗಳೂರಿನ ರಾಜಭವನದಲ್ಲಿ ಗುರುವಾರ ಆಯುಧ ಪೂಜೆಯನ್ನು ಸಂಭ್ರಮದಿಂದ ಆಚರಿಸಲಾಯಿತು.  ಕಾರ್ಯಕ್ರಮದಲ್ಲಿ ರಾಜ್ಯಪಾಲ ವಜುಭಾಯ್ ವಾಲಾ ಸೇರಿದಂತೆ ಸಿಬ್ಬಂದಿ ಭಾಗವಹಿಸಿದ್ದರು. ಪ್ರಜಾವಾಣಿ ಚಿತ್ರ‌‌‌‌/ಆನಂದ ಬಕ್ಷಿ
ಬೆಂಗಳೂರಿನ ರಾಜಭವನದಲ್ಲಿ ಗುರುವಾರ ಆಯುಧ ಪೂಜೆಯನ್ನು ಸಂಭ್ರಮದಿಂದ ಆಚರಿಸಲಾಯಿತು. ಕಾರ್ಯಕ್ರಮದಲ್ಲಿ ರಾಜ್ಯಪಾಲ ವಜುಭಾಯ್ ವಾಲಾ ಸೇರಿದಂತೆ ಸಿಬ್ಬಂದಿ ಭಾಗವಹಿಸಿದ್ದರು. ಪ್ರಜಾವಾಣಿ ಚಿತ್ರ‌‌‌‌/ಆನಂದ ಬಕ್ಷಿ    

ಬೆಂಗಳೂರು: ಬೆಂಗಳೂರು ಸೇರಿದಂತೆ ರಾಜ್ಯದೆಲ್ಲೆಡೆ ಆಯುಧ ಪೂಜೆಯನ್ನು ಜನರು ಶ್ರದ್ಧಾ ಭಕ್ತಿ ಮತ್ತು ಸಂಭ್ರಮದಿಂದ ಆಚರಿಸಿದರು.

ಗುರುವಾರ ಬಹುತೇಕ ಕಚೇರಿಗಳು, ಕಂಪನಿಗಳಿಗೆ ರಜೆ ಇದುದ್ದರಿಂದಬೆಂಗಳೂರಿನ ಜನರು ಬುಧವಾರವೇ ಹಬ್ಬ ಆಚರಿಸಿ ಸಂಭ್ರಮಿಸಿದರು. ಅಂಗಡಿ ಮಾಲೀಕರು ಸಿಹಿ ಹಂಚುವ ಮೂಲಕ ಶುಭಾಶಯ ವಿನಿಮಯ ಮಾಡಿಕೊಂಡರು.

ಗುರುವಾರ ಬೆಂಗಳೂರು, ಮೈಸೂರು, ಧಾರವಾಡ, ಮಂಗಳೂರು, ಕಲ್ಬುರ್ಗಿ ಸೇರಿದಂತೆರಾಜ್ಯದಾದ್ಯಂತ ಜನರ ಆಯುಧ ಪೂಜೆಯನ್ನು ಸಂಭ್ರಮದಿಂದ ಆಚರಿಸಿದರು. ಇಂದು ಕೂಡ ಹೂವು, ಹಣ್ಣು ಖರೀದಿಯ ವ್ಯಾಪಾರ ಜೋರಾಗಿತ್ತು.

ADVERTISEMENT

ಮನೆಗಳ ಎದುರು ಬೆಳಿಗ್ಗೆಯಿಂದಲೇ ರಂಗೋಲಿಗಳು ಕಂಗೊಳಿಸುತ್ತಿದ್ದವು. ಮನೆಗಳ ಎದುರು ವಾಹನಗಳನ್ನು ನಿಲ್ಲಿಸಿ, ಬೂದಗುಂಬಳ ಕಾಯಿ ಒಡೆದು ಪೂಜೆ ಮಾಡುವುದು ಎಲ್ಲೆಡೆ ಕಂಡುಬಂತು. ವಾಹನಗಳಿಗೆ ಹೂವಿನ ಹಾರ ಹಾಕಿ ಸಿಂಗರಿಸಲಾಗಿತ್ತು.

ಬಹುತೇಕ ಪ್ರಸಿದ್ಧ ದೇವಸ್ಥಾನಗಳಲ್ಲಿ ಜನರು ಸರತಿ ಸಾಲಿನಲ್ಲಿ ನಿಂತು ದೇವರ ದರ್ಶನ ಪಡೆಯುವುದು ಸಾಮಾನ್ಯವಾಗಿತ್ತು. ನಗರ ಪ್ರದೇಶಗಳಲ್ಲಿ ಸೈಕಲ್‌, ಬೈಕ್, ಕಾರು, ಜೀಪು ಸೇರಿದಂತೆ ವಾಹನಗಳಿಗೆ ಅಲಂಕರಿಸಿ ಜನರು ಸಂಭ್ರಮಿಸಿದರು.

ಇನ್ನು ಗ್ರಾಮೀಣ ಪ್ರದೇಶಗಳಲ್ಲಿ ರೈತಾಪಿ ಜನರು ಕೃಷಿ ಪರಿಕರಗಳು, ಟ್ಯಾಕ್ಟರ್ ಸೇರಿದಂತೆ ದಿನ ಬಳಕೆಯ ವಸ್ತುಗಳನ್ನು ಪೂಜಿಸಿ ಆಯುಧ ಪೂಜೆಯನ್ನು ಆಚರಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.