ADVERTISEMENT

ಕರ್ತವ್ಯಕ್ಕೆ ಹಾಜರಾದ ಆಯುಷ್ ವೈದ್ಯರು

​ಪ್ರಜಾವಾಣಿ ವಾರ್ತೆ
Published 22 ಜುಲೈ 2020, 18:17 IST
Last Updated 22 ಜುಲೈ 2020, 18:17 IST

ಬೆಂಗಳೂರು: ಗುತ್ತಿಗೆ ಆಧಾರದಲ್ಲಿ ಕಾರ್ಯನಿರ್ವಹಿಸುತ್ತಿರುವ ಎರಡುಸಾವಿರ ಆಯುಷ್ ವೈದ್ಯರ ವೇತನ ಹೆಚ್ಚಳ ಮಾಡಿ, ಬೇಡಿಕೆಗಳಿಗೆ ಸ್ಪಂದಿಸಿದ್ದರಿಂದಾಗಿ ಆಯುಷ್ ವೈದ್ಯರು ಬುಧವಾರ ಕರ್ತವ್ಯಕ್ಕೆ ವಾಪಸ್ ಆಗಿದ್ದಾರೆ.

ವೇತನ ಹೆಚ್ಚಳ ಹಾಗೂ ಸೇವಾ ಭದ್ರತೆಗೆ ಒತ್ತಾಯಿಸಿದ ಅವರು, ರಾಜೀನಾಮೆ ನೀಡಿ ಒಂದು ವಾರದಿಂದ ಮುಷ್ಕರ ನಡೆಸುತ್ತಿದ್ದರು. ಅದೇ ರೀತಿ,ತುರ್ತು ಸಂದರ್ಭದಲ್ಲಿ ಅಲೋಪಥಿ ಔಷಧಿ ಬಳಸಲು ತಮಗೂ ಅನುಮತಿ ನೀಡಬೇಕೆಂದು ಆಗ್ರಹಿಸಿ, 27 ಸಾವಿರ ಖಾಸಗಿ ಆಯುಷ್ ವೈದ್ಯರು ಮುಷ್ಕರಕ್ಕೆ ಕೈಜೋಡಿಸಿದ್ದರು.

‘ಆರು ತಿಂಗಳ ಅವಧಿಗೆ ವೇತನಏರಿಕೆ ಮಾಡಿರುವ ಸರ್ಕಾರ, ಕೇಂದ್ರ ಸರ್ಕಾರಕ್ಕೆ ಮನವರಿಕೆ ಮಾಡಿ, ಇದೇ ವೇತನವನ್ನು ಮುಂದುವರಿಸುವುದಾಗಿ ಭರವಸೆ ನೀಡಿದೆ. ತುರ್ತು ಸಂದರ್ಭದಲ್ಲಿ ಅಲೋಪಥಿಗೆ ಅವಕಾಶ ನೀಡುವ ಬಗ್ಗೆ ಪರಿಶೀಲಿಸಿ, ತೀರ್ಮಾನ ಕೈಗೊಳ್ಳುವುದಾಗಿ ಮುಖ್ಯಮಂತ್ರಿ ತಿಳಿಸಿದ್ದಾರೆ’ ಎಂದುಭಾರತೀಯ ಆಯುಷ್ ವೈದ್ಯರ ಒಕ್ಕೂಟದ ರಾಜ್ಯ ಖಜಾಂಚಿ ಡಾ.ಆನಂದ ಕಿರತಾಳ್ಯ ತಿಳಿಸಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.