ಬೆಂಗಳೂರು: ರಾಜ್ಯದಲ್ಲಿ ಕೋವಿಡ್ ನಿಯಂತ್ರಣಕ್ಕಾಗಿ ರಚಿಸಲಾದ ತಾಂತ್ರಿಕ ಸಲಹಾ ಸಮಿತಿಗೆ ಇಬ್ಬರು ಆಯುಷ್ ತಜ್ಞರನ್ನು ತಕ್ಷಣದಿಂದ ಜಾರಿಗೆ ಬರುವಂತೆ ಸಮಿತಿಗೆ ನಾಮ ನಿರ್ದೇಶನ ಮಾಡಲಾಗಿದೆ.
ರಾಷ್ಟ್ರೀಯ ಆಯುಷ್ ಮಿಶನ್‌ನ ಯೋಜನಾ ನಿರ್ದೇಶಕರಾದ ಡಾ. ಅನಂತ ದೇಸಾಯಿ ಅವನರನ್ನು ಸದಸ್ಯರನ್ನಾಗಿ ಮತ್ತು ಸರ್ಕಾರಿ ಆಯುರ್ವೇದ ವೈದ್ಯಕೀಯ ಮಹಾವಿದ್ಯಾಲಯ ಮತ್ತು ಆಸ್ಪತ್ರೆಯ ಸಹ ಪ್ರಾಧ್ಯಾಪಕರಾದ ಡಾ. ಆನಂದ ಕಟ್ಟಿ ಅವರರನ್ನು ಪರ್ಯಾಯ ಸದಸ್ಯರಾಗಿ ರಾಜ್ಯ ಸರ್ಕಾರ ನಾಮ ನಿರ್ದೇಶನ ಮಾಡಿದೆ.
ಕೋವಿಡ್‌ಗೆ ಆಯುಷ್ ವೈದ್ಯ ಪದ್ಧತಿಗಳ ಮೂಲಕ ಪರಿಣಾಮಕಾರಿ ಚಿಕಿತ್ಸೆ ನೀಡುವ ಉದ್ದೇಶದಿಂದ ಆಯುಷ್ ವೈದ್ಯರನ್ನು ಸಮಿತಿಗೆ ನೇಮಿಸಿಕೊಳ್ಳಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.