ADVERTISEMENT

‘ಆರು ತಿಂಗಳೊಳಗೆ ಎಲ್ಲರಿಗೂ ಆಯುಷ್ಮಾನ್‌ ಕಾರ್ಡ್‌’

​ಪ್ರಜಾವಾಣಿ ವಾರ್ತೆ
Published 30 ಏಪ್ರಿಲ್ 2022, 19:55 IST
Last Updated 30 ಏಪ್ರಿಲ್ 2022, 19:55 IST
ಸುಧಾಕರ್‌
ಸುಧಾಕರ್‌   

ಬೆಂಗಳೂರು: ರಾಜ್ಯದ ಎಲ್ಲರಿಗೂ ಆರು ತಿಂಗಳೊಳಗೆ ಆಯುಷ್ಮಾನ್‌ ಭಾರತ್‌ ಆರೋಗ್ಯ ಕಾರ್ಡ್‌ಗಳನ್ನು ವಿತರಿಸಬೇಕು ಎಂದು ಆರೋಗ್ಯ ಇಲಾಖೆ ಅಧಿಕಾರಿಗಳು ಮತ್ತು ಸಿಬ್ಬಂದಿಗೆ ಆರೋಗ್ಯ ಸಚಿವ ಡಾ.ಕೆ. ಸುಧಾಕರ್‌ ಸೂಚಿಸಿದರು.

ಆಯುಷ್ಮಾನ್‌ ಭಾರತ್‌ ದಿನದ ಅಂಗವಾಗಿ ಶನಿವಾರ ನಡೆದ ‘ಆರೋಗ್ಯ ಮಂಥನ’ ಕಾರ್ಯಕ್ರಮದಲ್ಲಿ ವಿವಿಧ ಜಿಲ್ಲೆಗಳ ಆರೋಗ್ಯಾಧಿಕಾರಿಗಳು, ವೈದ್ಯರು, ಸಿಬ್ಬಂದಿ ಮತ್ತು ಫಲಾನುಭವಿಗಳ ಜತೆ ಸಂವಾದ ನಡೆಸಿದ ಅವರು, ‘ಆಯುಷ್ಮಾನ್‌ ಯೋಜನೆಯ ಅನುಕೂಲಗಳನ್ನು ಪಡೆಯಲು ಎಲ್ಲರಿಗೂ ಅವಕಾಶವಾಗಬೇಕು. ಪ್ರತಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲೂ ಕಾರ್ಡ್‌ಗಳ ನೋಂದಣಿಗೆ ವ್ಯವಸ್ಥೆ ಮಾಡಬೇಕು’ ಎಂದರು.

ರಾಜ್ಯದ ಪ್ರತಿ ಉಪ ಆರೋಗ್ಯ ಕೇಂದ್ರದ ವ್ಯಾಪ್ತಿಯಲ್ಲಿ ಎಲ್ಲರಿಗೂ ರಕ್ತದೊತ್ತಡ ಹಾಗೂ ಮಧುಮೇಹ ತಪಾಸಣೆ ನಡೆಸಬೇಕು. ಈ ಎರಡೂ ಪರೀಕ್ಷೆಗಳ ವರದಿಗಳನ್ನು ಆರೋಗ್ಯ ಇಲಾಖೆಯ ಕೇಂದ್ರ ಕಚೇರಿಗೆ ರವಾನಿಸಬೇಕು. ರಾಜ್ಯದಾದ್ಯಂತ ಆಂದೋಲನದ ಮಾದರಿಯಲ್ಲಿ ಈ ಕಾರ್ಯಕ್ರಮ ನಡೆಸಬೇಕು ಎಂದರು.

ADVERTISEMENT

ಬಳಿಕ ಮಾತನಾಡಿದ ಸಚಿವರು, ‘ಆಯುಷ್ಮಾನ್ ಭಾರತ್ ಯೋಜನೆಯ ಅನುಷ್ಠಾನದಲ್ಲಿ ಕರ್ನಾಟಕ ಮೊದಲ ಸ್ಥಾನದಲ್ಲಿದೆ. 2021ರಲ್ಲಿ ಈ ಯೋಜನೆ ಅಡಿ 6.68 ಪ್ರಕರಣಗಳಲ್ಲಿ ₹ 960 ಕೋಟಿ ವೆಚ್ಚದ ಚಿಕಿತ್ಸಾ ಸೌಲಭ್ಯವನ್ನು ಜನರಿಗೆ ಒದಗಿಸಲಾಗಿದೆ’ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.