ADVERTISEMENT

ರೈತ ಗೀತೆ ಕಾಲರ್ ರಿಂಗ್ ಟೋನ್ ಆಗಲಿ: ಬಿ‌.ಸಿ.ಪಾಟೀಲ

​ಪ್ರಜಾವಾಣಿ ವಾರ್ತೆ
Published 19 ಜೂನ್ 2020, 10:12 IST
Last Updated 19 ಜೂನ್ 2020, 10:12 IST
ಬಿ.ಸಿ.ಪಾಟೀಲ
ಬಿ.ಸಿ.ಪಾಟೀಲ   

ಬೆಂಗಳೂರು: 'ಜೈ ಕಿಸಾನ್'ಎಂದು ಹೆಮ್ಮೆ ವ್ಯಕ್ತಪಡಿಸಿದ ಕೃಷಿ ಸಚಿವ ಬಿ.ಸಿ.ಪಾಟೀಲರು ಇದೀಗ 'ನೇಗಿಲ ಹಿಡಿದ ಹೊಲದೊಳು ಹಾಡುತ ಉಳುವ ಯೋಗಿಯ ನೋಡಲ್ಲಿ' ಎನ್ನುವ ರಾಷ್ಟ್ರಕವಿ ಕುವೆಂಪು ವಿರಚಿತ ಪದ್ಯವನ್ನು ಇನ್ನಷ್ಟು ಪ್ರಚುರಪಡಿಸಲು ಮುಂದಾಗಿದ್ದಾರೆ.

ಈ ಹಾಡು ಕರ್ನಾಟಕದಲ್ಲಿ ರೈತಗೀತೆಯೆಂದೇ ಪ್ರಖ್ಯಾತಿ ಹೊಂದಿದ್ದು, ಅನ್ನದಾತನ ಮಹತ್ವವೇನು? ಎನ್ನುವುದನ್ನು ಸಾರಿಸಾರಿ ಹೇಳುತ್ತದೆ. ಅಷ್ಟೇ ಅಲ್ಲ ಕಾರ್ಯಕ್ರಮಗಳಲ್ಲಿ ಈ ಗೀತೆ ಮೊಳಗುತ್ತಿದ್ದಂತೆಯೇ ಎದ್ದುನಿಂತು ಗೌರವವನ್ನೂ ಸೂಚಿಸಲಾಗುತ್ತದೆ.

ಇದೀಗ ಕೃಷಿ ಸಚಿವರು ರೈತರ ಮಹತ್ವವನ್ನು ಸಾರುವ ಈ ಹಾಡನ್ನು ಕೃಷಿ ವಿಶ್ವವಿದ್ಯಾಲಯದ ವಿಜ್ಞಾನಿಗಳು, ಅಧಿಕಾರಿಗಳು,ಸಿಬ್ಬಂದಿ, ಕೃಷಿ ಇಲಾಖೆಯ ಅಧಿಕಾರಿಗಳು ಮತ್ತು ಸಿಬ್ಬಂದಿಯೂ ಸೇರಿದಂತೆ ರೈತರು ತಾವು ಬಳಸುವ ಮೊಬೈಲ್‌ನ ಕಾಲರ್ ಟೋನ್,ರಿಂಗ್ ಟೋನ್ ಆಗಿ ಬಳಸುವಂತೆ ಸೂಚನೆ ನೀಡಿದ್ದಾರೆ.

ADVERTISEMENT

ಕೆಲವು ದಿನಗಳ ಹಿಂದೆ 'ಹಲೋ'ಬದಲಿಗೆ 'ಜೈ ಕಿಸಾನ್'ಬಳಸುವಂತೆ ಸಚಿವರು ನಿರ್ದೇಶಿಸಿದ್ದರು.ಇದೀಗ ರೈತಗೀತೆಯನ್ನು ಕಾಲರ್ ರಿಂಗ್ ಟೋನಾಗಿ ಬಳಸಲು ಯೋಜನೆ ರೂಪಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.