ADVERTISEMENT

ಗ್ರಾಮ ಪಂಚಾಯಿತಿಯಲ್ಲೂ ‘ಬಿ’ ಖಾತೆ?

​ಪ್ರಜಾವಾಣಿ ವಾರ್ತೆ
Published 6 ಮಾರ್ಚ್ 2025, 23:52 IST
Last Updated 6 ಮಾರ್ಚ್ 2025, 23:52 IST
<div class="paragraphs"><p>ವಿಧಾನಸೌಧ</p></div>

ವಿಧಾನಸೌಧ

   

ಬೆಂಗಳೂರು: ಗ್ರಾಮ ಪಂಚಾಯಿತಿಗಳ ವ್ಯಾಪ್ತಿಯಲ್ಲಿರುವ ಅನಧಿಕೃತ ಬಡಾವಣೆಗಳಿಗೂ ‘ಬಿ’ ಖಾತೆ ನೀಡುವ ಸಂಬಂಧ ಪಂಚಾಯತ್‌ರಾಜ್‌ ಕಾಯ್ದೆಗೆ ತಿದ್ದುಪಡಿ ತರಲು ರಾಜ್ಯ ಸರ್ಕಾರ ನಿರ್ಧರಿಸಿದೆ. ಈ ಉದ್ದೇಶದಿಂದ ಕಾಯ್ದೆ ತಿದ್ದುಪಡಿಗೆ ಕರಡು ಮಸೂದೆ ಸಿದ್ಧವಾಗಿದ್ದು ಪರಿಶೀಲನೆಯಲ್ಲಿದೆ ಎಂದು ಸರ್ಕಾರದ ಮೂಲಗಳು ತಿಳಿಸಿವೆ.  

ನಗರ-ಪಟ್ಟಣ, ಸ್ಥಳೀಯ ಸಂಸ್ಥೆ ವ್ಯಾಪ್ತಿಯಲ್ಲಿರುವ ಅನಧಿಕೃತ ನಿವೇಶನಗಳಿಗೆ, ಮನೆಗಳಿಗೆ ಒಂದು ಬಾರಿ ‘ಬಿ’ ಖಾತೆ ಮಾಡಿಕೊಡಲು ಸರ್ಕಾರ ಈಗಾಗಲೇ ನಿರ್ಧರಿಸಿದೆ.

ADVERTISEMENT

ಮಂಡ್ಯದಲ್ಲಿ ಕೃಷಿ ವಿವಿ: ಮಂಡ್ಯದಲ್ಲಿ ಹೊಸ ‘ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ (ಸಮಗ್ರ ವಿವಿ) ಸ್ಥಾಪಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ. ಮೈಸೂರು, ಮಂಡ್ಯ, ಹಾಸನ, ರಾಮನಗರ ಜಿಲ್ಲೆಗಳನ್ನು ಸೇರಿಸಿ ಕೃಷಿ ವಿಶ್ವವಿದ್ಯಾಲಯ ಸ್ಥಾಪಿಸುವ ಸಂಬಂಧ ಕಾಯ್ದೆ ರೂಪಿಸಲಾಗುತ್ತಿದೆ. ಮಂಡ್ಯದಲ್ಲಿ ಕೃಷಿ ವಿಶ್ವವಿದ್ಯಾಲಯಲ್ಲಿ ಸ್ಥಾಪಿಸುವುದಾಗಿ 2024–25ನೇ ಸಾಲಿನ ಬಜೆಟ್‌ನಲ್ಲಿ ಮುಖ್ಯಮಂತ್ರಿ ಘೋಷಿಸಿದ್ದರು. ಈ ಬಗ್ಗೆ ಅಧ್ಯಯನಕ್ಕೆ 2024ರ ಮಾರ್ಚ್‌ 15ರಂದು ವಿಶ್ರಾಂತ ಕುಲಪತಿ ಡಾ.ಎಸ್‌. ರಾಜೇಂದ್ರ ಪ್ರಸಾದ್‌ ಅಧ್ಯಕ್ಷತೆಯ ತಜ್ಞರ ಸಮಿತಿ ರಚಿಸಲಾಗಿತ್ತು. ಸಮಿತಿಯು 2024ರ ಜುಲೈ 10ರಂದು ಕೃಷಿ ಸಚಿವ ಎನ್‌. ಚಲುವರಾಯಸ್ವಾಮಿ ಅವರಿಗೆ ವರದಿ ಸಲ್ಲಿಸಿತ್ತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.