ADVERTISEMENT

ಕಾಂಗ್ರೆಸ್‌ ಪಕ್ಷ ವೋಟ್‌ ಬ್ಯಾಂಕ್‌ ರಾಜಕಾರಣ ಮುಂದುವರೆಸಿದೆ: ಬಿ.ಎಲ್‌. ಸಂತೋಷ್‌

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 14 ಆಗಸ್ಟ್ 2020, 6:34 IST
Last Updated 14 ಆಗಸ್ಟ್ 2020, 6:34 IST
ಬಿಜೆಪಿ ಮುಖಂಡ ಬಿ.ಎಲ್‌.ಸಂತೋಷ್‌
ಬಿಜೆಪಿ ಮುಖಂಡ ಬಿ.ಎಲ್‌.ಸಂತೋಷ್‌   

ಬೆಂಗಳೂರು: ಕಾಂಗ್ರೆಸ್‌ ಪಕ್ಷವು ಓಲೈಕೆ ಮತ್ತು ವೋಟ್‌ ಬ್ಯಾಂಕ್‌ ರಾಜಕಾರಣವನ್ನು ಮುಂದುವರೆಸಿದೆ ಎಂದು ಬಿಜೆಪಿ ಮುಖಂಡ ಬಿ.ಎಲ್‌.ಸಂತೋಷ್ ಟೀಕಿಸಿದ್ದಾರೆ.

ಈ ಬಗ್ಗೆ ಶುಕ್ರವಾರ ಬೆಳಿಗ್ಗೆ ಟ್ವೀಟ್‌ ಮಾಡಿರುವ ಅವರು, 'ಗಲಭೆಗಳನ್ನು ಖಂಡಿಸುವುದಿಲ್ಲ. ದಲಿತ ಶಾಸಕರ ಮನೆಯ ಮೇಲೆ ನಡೆದ ದಾಳಿಯನ್ನು ಖಂಡಿಸುವುದಿಲ್ಲ. ಶೃಂಗೇರಿಯಲ್ಲಿ ಆದಿ ಶಂಕರಾಚಾರ್ಯ ಪ್ರತಿಮೆಯನ್ನು ಅಪವಿತ್ರಗೊಳಿಸುವುದನ್ನು ಖಂಡಿಸುವುದಿಲ್ಲ. ಕಾಂಗ್ರೆಸ್‌ ಪಕ್ಷವು ತನ್ನ ಹಳೆಯ ಅಭ್ಯಾಸವಾಗಿರುವ ಓಲೈಕೆ ಮತ್ತು ವೋಟ್‌ ಬ್ಯಾಂಕ್‌ ರಾಜಕಾರಣ ಮುಂದೆವರೆಸಿದೆ' ಎಂದು ಅವರು ಟ್ವೀಟ್‌ ಮಾಡಿದ್ದಾರೆ.

'ಕಾಂಗ್ರೆಸ್‌ ಕಾರ್ಪೋರೇಟರ್‌ ಪತಿ ಕಲೀಮ್‌ ಪಾಷಾ ಅವರನ್ನು ಬಂಧಿಸಲಾಗಿದೆ. ಎಸ್‌ಡಿಪಿಐನ ನಾಲ್ವರು ಹಿರಿಯ ಕಾರ್ಯಕರ್ತರನ್ನು ವಶಪಡಿಸಿಕೊಳ್ಳಲಾಗಿದೆ. ಇನ್ನೂ ರಾಜ್ಯ ಕಾಂಗ್ರೆಸ್‌ ನಾಯಕರು ಆಪಾದನೆಯನ್ನು ಬೇರೆಡೆಗೆ ತಿರುಗಿಸಿಲು ಪ್ರಯತ್ನಿಸುತ್ತಿದ್ದಾರೆ. ಅವರು ಗಲಭೆಗಳನ್ನು ಖಂಡಿಸುವುದಿಲ್ಲ. ಮುಂಬರುವ ಬಿಬಿಎಂಪಿ ಚುನಾವಣೆಯ ಮೇಲೆ ಮಾತ್ರ ಅವರ ಕಣ್ಣುಗಳಿವೆ' ಎಂದು ಸಂತೋಷ್‌ ತಿಳಿಸಿದ್ದಾರೆ.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.