ADVERTISEMENT

ಬಿಎಸ್‌ವೈ ರಾಜೀನಾಮೆಗೆ ಕಾಂಗ್ರೆಸ್‌ ನಾಯಕ ರಣದೀಪ್ ಸುರ್ಜೇವಾಲ ಆಗ್ರಹ

​ಪ್ರಜಾವಾಣಿ ವಾರ್ತೆ
Published 23 ಸೆಪ್ಟೆಂಬರ್ 2020, 11:32 IST
Last Updated 23 ಸೆಪ್ಟೆಂಬರ್ 2020, 11:32 IST
ಕಾಂಗ್ರೆಸ್‌ ರಾಜ್ಯ ಉಸ್ತುವಾರಿ ರಣದೀಪ್‌ ಸಿಂಗ್‌ ಸುರ್ಜೇವಾಲ
ಕಾಂಗ್ರೆಸ್‌ ರಾಜ್ಯ ಉಸ್ತುವಾರಿ ರಣದೀಪ್‌ ಸಿಂಗ್‌ ಸುರ್ಜೇವಾಲ   

ಬೆಂಗಳೂರು: ಭ್ರಷ್ಟಾಚಾರದ ಆರೋಪ ಎದುರಿಸುತ್ತಿರುವ ಹಾಗೂ ಸಮರ್ಥ ಆಡಳಿತ ನೀಡಲು ವಿಫಲವಾಗಿರುವ ಮುಖ್ಯಮಂತ್ರಿ ಯಡಿಯೂರಪ್ಪ ತಕ್ಷಣ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಕಾಂಗ್ರೆಸ್‌ ರಾಜ್ಯ ಉಸ್ತುವಾರಿ ರಣದೀಪ್‌ ಸಿಂಗ್‌ ಸುರ್ಜೇವಾಲ ಆಗ್ರಹಿಸಿದರು.

ನೂತನವಾಗಿ ನೇಮಕಗೊಂಡ ಬಳಿಕ ರಾಜ್ಯಕ್ಕೆ ಬಂದ ಅವರು, ಕೆಪಿಸಿಸಿ ಕಚೇರಿಯಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್‌, ಕಾಂಗ್ರೆಸ್‌ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಜೊತೆ ಜಂಟಿ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದರು.

ಸಿದ್ದರಾಮಯ್ಯ ಮಾತನಾಡಿ, ಸರ್ಕಾರದ ಭ್ರಷ್ಟಾಚಾರದ ಬಗ್ಗೆ ಸುರ್ಜೇವಾಲಾ ಮಾತನಾಡಿದ್ದಾರೆ. ದುರಾಡಳಿತ, ಭ್ರಷ್ಟಾಚಾರ ಎರಡೂ ಒಟ್ಟಿಗೆ ಹೋಗುತ್ತವೆ ಅಂತ ಮಹಾತ್ಮ ಗಾಂಧಿ ಹೇಳಿದ್ದರು ಎಂದರು.

ADVERTISEMENT

ವಿಧಾನಪರಿಷತ್‌ ವಿರೋಧ ಪಕ್ಷದ ನಾಯಕ ಎಸ್‌.ಆರ್‌. ಪಾಟೀಲ, ಶಾಸಕ ದಿನೇಶ್ ಗುಂಡೂರಾವ್‌, ಎಚ್.ಕೆ. ಪಾಟೀಲ, ಕೆಪಿಸಿಸಿ ಕಾರ್ಯಾಧ್ಯಕ್ಷರಾದ ಈಶ್ವರ್ ಖಂಡ್ರೆ, ಸತೀಶ ಜಾರಕಿಹೊಳಿ, ಸಲೀಂ ಅಹ್ಮದ್, ಮಾಜಿ ಸಂಸದ ಕೆ.ಎಚ್. ಮುನಿಯಪ್ಪ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.