ADVERTISEMENT

ಹೌದು, ಆಡಿಯೊದಲ್ಲಿರುವ ಧ್ವನಿ ನನ್ನದೇ: ಬಿ.ಎಸ್‌.ಯಡಿಯೂರಪ್ಪ ತಪ್ಪೊಪ್ಪಿಗೆ

​ಪ್ರಜಾವಾಣಿ ವಾರ್ತೆ
Published 10 ಫೆಬ್ರುವರಿ 2019, 6:41 IST
Last Updated 10 ಫೆಬ್ರುವರಿ 2019, 6:41 IST
ಬಿ.ಎಸ್‌.ಯಡಿಯೂರಪ್ಪ
ಬಿ.ಎಸ್‌.ಯಡಿಯೂರಪ್ಪ   

ಹುಬ್ಬಳ್ಳಿ: ‘ಆಪರೇಷನ್‌ ಕಮಲ ಕುರಿತು ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಅವರು ಬಿಡುಗಡೆ ಮಾಡಿರುವ ಆಡಿಯೊದಲ್ಲಿನ ಧ್ವನಿ ನನ್ನದೆ’ ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ಎಸ್‌.ಯಡಿಯೂರಪ್ಪ ಹೇಳಿದರು.

ನಗರದ ಏರ್‌ಪೋರ್ಟ್‌ನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿಅವರು, ‘ನನ್ನ ಬಳಿ ಗುರುಮಠಕಲ್ ಜೆಡಿಎಸ್ ಶಾಸಕ ನಾಗನಗೌಡ ಅವರ ಪುತ್ರ ಶರಣ್ ಗೌಡ ಮಾತನಾಡಿದ್ದು ನಿಜ. ಆದರೆ ಅವರನ್ನು ಮುಖ್ಯಮಂತ್ರಿ ಕುಮಾರಸ್ವಾಮಿ ಅವರೇ ನನ್ನ ಬಳಿಕಳುಹಿಸಿಕೊಟ್ಟಿದ್ದಾರೆ, ಆಡಿಯೊ ಹಿಂದೆ ಅವರುಕುತಂತ್ರ ರಾಜಕೀಯ ನಡೆಸಿದ್ದಾರೆ’ ಎಂದು ಆರೋಪಿಸಿದರು.

‘ಆಡಿಯೊದಲ್ಲಿ ನಾನು ಮಾತನಾಡಿದ ವಿಚಾರಗಳು ಬೇರೆಯೇ ಇದೆ. ಆದರೆಕುಮಾರಸ್ವಾಮಿ ಅವರಿಗೆ ಬೇಕಾಗಿರುವುದನ್ನು ಮಾತ್ರಬಳಸಿಕೊಂಡು ಸತ್ಯವನ್ನು ಮರೆಮಾಚಿದ್ದಾರೆ. ಅವರು ಬ್ಲ್ಯಾಕ್‌ಮೇಲ್‌ ಮಾಡುತ್ತಿದ್ದಾರೆ’ ಎಂದು ಹೇಳಿದರು.

ಆಡಿಯೊದಲ್ಲಿನ ಮುಂದುವರಿದಭಾಗವನ್ನು ಸೋಮವಾರ ಸದನದಲ್ಲಿ ಬಿಡುಗಡೆ ಮಾಡುತ್ತೇನೆ ಎಂದರು.

ಇದೇ ವೇಳೆ ಸಚಿವ ರೇವಣ್ಣ ಪುತ್ರ ಪ್ರಜ್ವಲ್‌ ರೇವಣ್ಣ ಹೇಳಿಕೆ ಪ್ರಸ್ತಾಪಿಸಿ, ‘ನಮ್ಮದು ಸೂಟ್‌ಕೇಸ್‌ ಸಂಸ್ಕೃತಿಯ ಪಕ್ಷ, ಸೂಟ್‌ಕೇಸ್‌ ಇಲ್ಲದೆ ಏನು ಕೆಲಸ ನಡೆಯುವುದಿಲ್ಲ’ ಎಂದು ಹೇಳಿರುವ ವಿಡಿಯೊ ನನ್ನ ಬಳಿ ಇದೆ ಅದನ್ನು ಬಿಡುಗಡೆ ಮಾಡುವುದಾಗಿ' ಹೇಳಿದರು.

ಮೈತ್ರಿ ಸರ್ಕಾರ ನಾಲ್ಕು ದಿನದಲ್ಲಿ ಪತನ
ಯಡಿಯೂರಪ್ಪ ವಿರುದ್ಧ ಮುಖ್ಯಮಂತ್ರಿ ಕುಮಾರಸ್ವಾಮಿ ಮಾಡಿರುವ ಆರೋಪ ಸತ್ಯಕ್ಕೆ ದೂರವಾಗಿದೆ. ಮುಂದಿನ ನಾಲ್ಕು ದಿನಗಳಲ್ಲಿ ಮೈತ್ರಿ ಸರ್ಕಾರ ಪತನವಾಗಲಿದೆ ಎಂದು ವಿಪಕ್ಷ ನಾಯಕ ಕೆ.ಎಸ್‌.ಈಶ್ವರಪ್ಪ ಭವಿಷ್ಯ ನುಡಿದರು.

ಮುಖ್ಯಮಂತ್ರಿಗಳಿಗೆ ತಮ್ಮ ಕುರ್ಚಿ ಹೋಗುತ್ತದೆ ಎಂಬ ಭಯದಿಂದ ಆಡಿಯೊ ಬಗ್ಗೆ ಗೊಂದಲದ ಹೇಳಿಕೆಗಳನ್ನು ನೀಡುತ್ತಿದ್ದಾರೆ. ನಾವು ಯಾವುದೇ ಆಪರೇಷನ್‌ ಕಮಲವನ್ನು ಮಾಡಿಲ್ಲ ಎಂದು ಹೇಳಿದರು.

ಇವನ್ನೂ ಓದಿ...

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.