
ಬಿ.ಎಸ್. ಯಡಿಯೂರಪ್ಪ
ಬೆಂಗಳೂರು: ನನ್ನ ವಿರುದ್ಧ ಹೆಣ್ಣುಮಗಳೊಬ್ಬಳು ದೂರು ನೀಡಿದ್ದು, ಎಫ್‌ಐಆರ್ ಕೂಡ ದಾಖಲಾಗಿದೆ. ಕಾನೂನು ಪ್ರಕಾರ ಅದನ್ನು ಎದುರಿಸುತ್ತೇನೆ ಎಂದು ಬಿಜೆಪಿ ಸಂಸದೀಯ ಮಂಡಳಿ ಸದಸ್ಯ ಬಿ.ಎಸ್.ಯಡಿಯೂರಪ್ಪ ಹೇಳಿದರು.
ಇದರಲ್ಲಿ ರಾಜಕೀಯ ಪಿತೂರಿ ಇದೆ ಎಂದು ಭಾವಿಸುವುದಿಲ್ಲ ಎಂದು ಅವರು ಸುದ್ದಿಗಾರರ ಜತೆ ಮಾತನಾಡಿ ತಿಳಿಸಿದರು.
ಸುಮಾರು ಒಂದೂವರೆ ತಿಂಗಳ ಹಿಂದೆ ನನ್ನ ಮನೆಯ ಬಳಿ ತಾಯಿ–ಮಗಳು ಬಹಳ ಸಲ ಬಂದು ಹೋಗಿದ್ದರು. ಒಂದು ದಿನ ಕಣ್ಣೀರು ಹಾಕುತ್ತಾ ನಿಂತಿದ್ದರು. ಅವರನ್ನು ಕರೆಸಿ ಏನಮ್ಮ ಸಮಸ್ಯೆ ಎಂದು ಕೇಳಿದ್ದೆ. ತಮಗೆ ಅನ್ಯಾಯ ಆಗಿದೆ ಎಂದು ಹೇಳಿಕೊಂಡರು. ತಕ್ಷಣವೇ ಪೊಲೀಸ್ ಕಮಿಷನರ್ ದಯಾನಂದ ಅವರಿಗೆ ಕರೆ ಮಾಡಿ ಈ ವಿಚಾರ ತಿಳಿಸಿ ಅವರ ಬಳಿ ಕಳಿಸಿದೆ. ಆದರೆ ಅವರು ನನ್ನ ಬಗ್ಗೆಯೇ ಏನೇನೋ ಹೇಳಲು ಶುರು ಮಾಡಿದರು ಎಂದು ವಿವರಿಸಿದರು.
ಈಗ ಬೇರೆ ರೀತಿಯಲ್ಲಿ ನನ್ನ ವಿರುದ್ಧ ದೂರು ದಾಖಲು ಮಾಡಿದ್ದಾರೆ. ಕಷ್ಟ ಎಂದು ಹೇಳಿಕೊಂಡಾಗ ಹಣವನ್ನೂ ಕೊಟ್ಟು ಕಳಿಸಿದ್ದೆ. ಉಪಕಾರ ಮಾಡಲು ಹೋಗಿ ಏನೋ ಆಯಿತು.. ಇದನ್ನು ನಿರೀಕ್ಷೆ ಮಾಡಿರಲಿಲ್ಲ. ಕಾನೂನು ಪ್ರಕಾರವೇ ಎಲ್ಲವನ್ನು ಎದುರಿಸುತ್ತೇನೆ ಎಂದು ಯಡಿಯೂರಪ್ಪ ಹೇಳಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.